ಕರ್ನಾಟಕ

ಕವನ ರಚನಾ ಸ್ಪರ್ಧೆ : ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ

ರಾಜ್ಯ(ಮಡಿಕೇರಿ) ಮಾ.26:- ಪ್ರಸ್ತುತ ದಿನಗಳಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಆಸಕ್ತಿ ಕುಂಟಿತಗೊಳ್ಳುತ್ತಿದ್ದು, ಸಾಹಿತ್ಯ ರಚನೆಯನ್ನು ಮೈಗೂಡಿಸಿಕೊಳ್ಳುವ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕೆಂದು ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಗಣಕಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರವಿಶಂಕರ್ ಕರೆ ನೀಡಿದರು.

ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನ ಕನ್ನಡ ವಿಭಾದ ವತಿಯಿಂದ ನಡೆದ ಕವನ ರಚನಾ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.  ವಿಷಯ ಮತ್ತು ಭಾವನೆಯನ್ನು ವ್ಯಕ್ತಪಡಿಸಲು ಸಾಹಿತ್ಯ ಸಹಕಾರಿಯಾಗಿದ್ದು, ವಿದ್ಯಾರ್ಥಿಗಳು ಸಾಹಿತ್ಯಾಸಕ್ತಿಯನ್ನು ಹೆಚ್ಚಿಸಿಕೊಳ್ಳಬೇಕೆಂದು ಕರೆ ನೀಡಿದರು.

ಕವನ ರಚನಾ ಸ್ಪರ್ಧೆಯಲ್ಲಿ ಅಕ್ಷಯ್ ರೈ ಪ್ರಥಮ(ತೃತೀಯ ಬಿ.ಎ ಕೆ.ಜೆ.ಎಸ್), ದ್ವೀತಿಯ ಸ್ಥಾನ ಪುಷ್ಪ (ದ್ವೀತಿಯ ಬಿಎ ಕೆಜೆಎಸ್), ಮರ್ಲಿ (ದ್ವೀತಿಯ ಬಿ.ಕಾಂ) ತೃತೀಯ ಸ್ಥಾನ ಪಡೆದರು.

ಕಾಲೇಜ್‍ನ ಪ್ರಾಂಶುಪಾಲರಾದ ಡಾ.ಪಾರ್ವತಿ ಅಪ್ಪಯ್ಯ, ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಎನ್.ಜಯಂತಿ, ಕನ್ನಡ ವಿಭಾಗದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.   (ಕೆಸಿಐ,ಎಸ್.ಎಚ್)

Leave a Reply

comments

Related Articles

error: