ಮೈಸೂರು

ಹೆಚ್ಚಿದ ಬೀದಿ ನಾಯಿಗಳ ಹಾವಳಿ : ನಾಯಿ ಹಿಡಿಯಲು ಕಾರ್ಯಾಚರಣೆ

ಮೈಸೂರು,ಮಾ.26:- ಮೈಸೂರು ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಿದ್ದು, ಸಿದ್ಧಾರ್ಥ ಬಡಾವಣೆಯಲ್ಲಿನ ಜನತೆಯ ದೂರಿನ ಹಿನ್ನೆಲೆಯಲ್ಲಿ ಮಹಾನಗರಪಾಲಿಕೆಯ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಇಂದು ಬೆಳ್ಳಂಬೆಳಿಗ್ಗೆ  ಸಿದ್ಧಾರ್ಥ ಬಡಾವಣೆಯಲ್ಲಿರುವ ಬೀದಿ ನಾಯಿಗಳನ್ನು ಸೆರೆ ಹಿಡಿದಿದ್ದಾರೆ. ಸ್ಥಳೀಯರ ದೂರಿನ ಮೇಲೆ ಎಚ್ಚೆತ್ತ ಪಾಲಿಕೆ  15ಕ್ಕೂ ಹೆಚ್ಚು ನಾಯಿಗಳನ್ನು ಸೆರೆ ಹಿಡಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ನಾಯಿ ಕಡಿದರೆ ನೀಡುವ ಆ್ಯಂಟಿ ರೇಬಿಸ್ ವ್ಯಾಕ್ಸಿನ್ ಸ್ಟಾಕ್ ಇಲ್ಲ ಎನ್ನಲಾಗುತ್ತಿದ್ದು, ಇದರಿಂದ ಆತಂಕಗೊಂಡ ಸ್ಥಳೀಯರು ಮಹಾನಗರಪಾಲಿಕೆಗೆ ದೂರು ನೀಡಿದ್ದರು. ಕೂಡಲೇ ಎಚ್ಚೆತ್ತ ಪಾಲಿಕೆ ನಾಯಿಗಳನ್ನು ಹಿಡಿಯಲು ಮುಂದಾಗಿದೆ. ಸಿದ್ಧಾರ್ಥ ಬಡಾವಣೆಯಲ್ಲಿರುವ 15 ಬೀದಿ ನಾಯಿಗಳನ್ನು ಸೆರೆ ಹಿಡಿದಿದ್ದಾರೆ ಎನ್ನಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: