
ಮೈಸೂರು
ಮಾನಸಿಕ ಅಸ್ವಸ್ಥನಾಗಿದ್ದ ರೈತ ಆತ್ಮಹತ್ಯೆ
ಮೈಸೂರು,ಮಾ.26:- ಮಾನಸಿಕ ಅಸ್ವಸ್ಥನಾಗಿದ್ದ ರೈತ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆ.ಆರ್.ನಗರ ತಾಲೂಕು ಚಂದಗಾಲ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ನಾಗೇಶ್ (48) ಎಂದು ಗುರುತಿಸಲಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಮಾನಸಿಕವಾಗಿ ಬಳಲುತ್ತಿದ್ದ ನಾಗೇಶ್ ಗೆ ಚಿಕಿತ್ಸೆ ನೀಡಲಾಗಿತ್ತು. ಮಾರ್ಚ್ 22ರಂದು ತಮ್ಮ ಮನೆಯಲ್ಲಿ ನೇಣುಬಿಗಿದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)