ಕರ್ನಾಟಕ

ಗೌರಿ ಲಂಕೇಶ್‍ಗೆ 6 ತಿಂಗಳ ಕಾರಾಗೃಹವಾಸ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರಿಗೆ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು 6 ತಿಂಗಳ ಕಾರಾಗೃಹವಾಸ ಶಿಕ್ಷೆ ಹಾಗೂ 9 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಹುಬ್ಬಳ್ಳಿಯ 2ನೇ ಜೆಎಂಎಫ್‍ಸಿ ನ್ಯಾಯಾಲಯವು ಈ ತೀರ್ಪು ನೀಡಿದ್ದು 2008ರಲ್ಲಿ ಗೌರಿ ಲಂಕೇಶ್ ತಮ್ಮ ಪತ್ರಿಕೆಯಲ್ಲಿ ಸಂಸದ ಪ್ರಹ್ಲಾದ್ ಹಾಗೂ ಬಿಜೆಪಿ ಕಾರ್ಯಕರ್ತನ ವಿರುದ್ಧ ಅವಹೇಳನಕಾರಿ ಲೇಖನ ಪ್ರಕಟಿಸಿದ್ದರು. ಈ ಬಗ್ಗೆ ಸಂಸದ ಹಾಗೂ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಹಾಗೂ ಕಾರ್ಯಕರ್ತ ಉಮೇಶ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು. 8 ವರ್ಷಗಳ ಸುದೀರ್ಘ ವಿಚಾರಣೆ ನಡೆದಿದ್ದು ದೂರುದಾರ ಪ್ರಹ್ಲಾದ್ ಜೋಶಿ ಹಾಗೂ ಇತತರಿಗೆ ತಲಾ 4 ಸಾವಿರ ದಂಡ ಕಟ್ಟಿ 1 ಸಾವಿರ ರೂ. ಕೋರ್ಟಿಗೆ ನೀಡಬೇಕು ದಂಡ ಕಟ್ಟದಿದ್ರೆ ಒಂದು ತಿಂಗಳು ಹೆಚ್ಚಿನ ಶಿಕ್ಷೆ ಅನುಭವಿಸಬೇಕು ಎಂದು ನ್ಯಾಯಾಧೀಶ ಅಮರ್‍ ವಿ.ಎಲ್. ತೀರ್ಪು ನೀಡಿದ್ದಾರೆ.

Leave a Reply

comments

Related Articles

error: