ಮೈಸೂರು

ಪರಿಶಿಷ್ಟ ವರ್ಗಕ್ಕೆ ಶೇ.7.5ರಷ್ಟು ಮೀಸಲಾತಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಮಾ.27:- ರಾಜ್ಯ ಸರ್ಕಾರ ಪರಿಶಿಷ್ಟ ವರ್ಗಕ್ಕೆ ಶೇ.7.5ರಷ್ಟು ಮೀಸಲಾತಿ ನೀಡುವಂತೆ ಒತ್ತಾಯಿಸಿ ಮೈಸೂರು ಜಿಲ್ಲಾ ನಾಯಕರ ಯುವಕರ ಸಂಘದ ವತಿಯಿಂದ ಮೈಸೂರು ನ್ಯಾಯಾಲಯದ ಮುಂಭಾಗದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಯಿತು.

ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ರಾಜ್ಯದಲ್ಲಿರುವ ಪರಿಶಿಷ್ಟ ವರ್ಗದ ಜನರಿಗೆ ಸಂವಿಧಾನದತ್ತವಾಗಿ ಪ್ರಸ್ತುತ ಶೇ.3 ಮೀಸಲಾತಿ ಸೌಲಭ್ಯ ಒದಗಿಸಿಕೊಟ್ಟಿದ್ದು,ವೈಜ್ಞಾನಿಕವಾಗಿ ಜನಸಂಖ್ಯೆಗನುಗುಣವಾಗಿ ಈಗಾಗಲೇ ಕೇಂದ್ರ ಸರ್ಕಾರ ಶೇ.7ರಷ್ಟು ಮೀಸಲಾತಿ ನೀಡುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಸುಮಾರು 80ಲಕ್ಷಕ್ಕೂ ಹೆಚ್ಚು ಪರಿಶಿಷ್ಟ ವರ್ಗದ ಜನರು ವಾಸವಾಗಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರವು ಕೂಡ ಪರಿಶಿಷ್ಟವರ್ಗದ ಅಭ್ಯುದಯಕ್ಕೆ ಬದ್ಧವಾಗಿ ಶೇ.7ರಷ್ಟು ಅನುದಾನವನ್ನು ನೀಡಿ ಪರಿಶಿಷ್ಟವರ್ಗದ ಸಮುದಾಯಗಳು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ರಾಜಕೀಯವಾಗಿ ಹಾಗೂ ಆರ್ಥಿಕವಾಗಿ ಸಬಲವಾಗಲು ಹಾಗೂ ಸಮಾಜದ ಮುಖ್ಯವಾಹಿನಿಗೆ ಬರಲು ಸೂಕ್ತಕ್ರಮ ವಹಿಸುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮೈಸೂರು ಜಿಲ್ಲಾ ನಾಯಕ ಯುವಕರ ಸಂಘದ ಅಧ್ಯಕ್ಷ, ವಕೀಲ ಪಡುವಾರಹಳ್ಳಿ ಎಂ.ರಾಮಕೃಷ್ಣ, ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ದ್ಯಾವಪ್ಪ ನಾಯಕ, ಹುಣಸೂರು ಪ್ರಭಾಕರ, ಚಾಮುಂಡಿಬೆಟ್ಟ ಶ್ರೀಧರ್,ಟೆನ್ನಿಸ್ ಕೆ.ಗೋಪಾಲ್, ದುರ್ಗಾಪ್ರಸಾದ್, ಮಂಜುನಾಥಪುರ ಮಹೇಶ್, ವಿನೋದ್ ನಾಗವಾಲ,ತಿಮ್ಮನಾಯಕ, ಎಂ.ಶಿವಪ್ರಕಾಶ್,ಜಿ.ಎಂ.ದಿವಾಕರ, ಕೆರೆಹಳ್ಳಿ ಮಾದೇಶ್, ಎಳನೀರು ಕುಮಾರ್, ಮಧುವನ ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: