ಸುದ್ದಿ ಸಂಕ್ಷಿಪ್ತ

ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ‘ಪ್ರತಿಭಾ ಪುರಸ್ಕಾರ : ಅರ್ಜಿ ಆಹ್ವಾನ

ಮೈಸೂರು, ಮಾ.27 : ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 127ನೇ ಜನ್ಮ ದಿನಾಚರಣೆ ಅಂಗವಾಗಿ ಪರಿಶಿಷ್ಟ ಜಾತಿ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಆಸಕ್ತರು ಅರ್ಜಿ ಸಲ್ಲಿಸಬಹುದು.

ಏ.14ರಂದು ನಡೆಯುವ ಜನ್ಮ ದಿನಾಚರಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳಿಗೆ, ಅಧ್ಯಾಪಕರಿಗೆ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ್ಯಾಂಕ್ ಪಡೆದವರಿಗೆ, ಪಿಎಚ್.ಡಿ. ಪಡೆದವರನ್ನು ಸನ್ಮಾನಿಸಲಾಗುವುದು. ಆಸಕ್ತರು ಏ.10ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು. ಉಪಕುಲಸಚಿವರು, ಪರಿಶಿಷ್ಟ ಜಾತಿ/ವರ್ಗ ವಿಶೇಷ ಘಟಕ, ಮಹಾರಾಜ ಕಾಲೇಜು ಶತಮಾನೋತ್ಸವ ಭವನ, ಮೈಸೂರು ಇಲ್ಲಿ ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: