ಸುದ್ದಿ ಸಂಕ್ಷಿಪ್ತ

ಬೆರಳಚ್ಚುಗಾರರ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು,ಮಾ.28:-  ಮೈಸೂರು ಜಿಲ್ಲೆ ನ್ಯಾಯಾಂಗ ಘಟಕದಲ್ಲಿ  ಖಾಲಿ ಇರುವ 12 ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿಗಳನ್ನು ಮೈಸೂರು ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ http://ecorts/gov.in/mysuru/online-recruitment ರಲ್ಲಿ ನೀಡಲಾದ ಲಿಂಕ್ ಮೂಲಕ ಏಪ್ರಿಲ್ 16 ರಿಂದ ಮೇ 15ರ ವರೆಗೆ ಸಲ್ಲಿಸತಕ್ಕದ್ದು ಮತ್ತು ಭಾರತೀಯ ಸ್ಟೇಟ್ ಬ್ಯಾಂಕ್ ಮುಖಾಂತರ ಶುಲ್ಕವನ್ನು ಪಾವತಿಸಲು ಮೇ 18 ಕೊನೆಯ ದಿನಾಂಕವಾಗಿರುತ್ತದೆ ಎಂದು ಮೈಸೂರು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: