ಕರ್ನಾಟಕ

ಮಂಡ್ಯ: ಮಾರ್ಚ್ 29 ರಂದು ವಿದ್ಯುತ್ ವ್ಯತ್ಯಯ

ಮಂಡ್ಯ (ಮಾ.28): ಕೆ.ಐ.ಎ.ಡಿ.ಬಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ವಿದ್ಯುತ್ ವಿತರಣಾ ಕೇಂದ್ರದ ಹೊರಡುವ ಫೀಡರ್‍ಗಳಿಗೆ ಒಳಪಡುವ ಪ್ರದೇಶಗಳಲ್ಲಿ ಮಾರ್ಚ್ 29 ರಂದು ವಿದ್ಯುತ್ ವ್ಯತ್ಯಯ ಉಂಟಾಗುವುದು.

ಗುತ್ತಲು, ಫ್ಯಾಕ್ಟರಿ ವೃತ್ತ, ಕೈಗಾರಿಕ ಬಡಾವಣೆಗಳು, ಎಂ.ಸಿ.ರಸ್ತೆ, ತಾವರೆಗೆರೆ, ನೆಹರು ನಗರ, ಉದಯಗಿರಿ, ಸಾದತ್ ಮೊಹಲ್ಲ, ಚನ್ನಯ್ಯ ಬಡಾವಣೆ, ಸಿದ್ದಾರ್ಥ ಬಡಾವಣೆ, ಬೆಂಗಳೂರು ಮುಖ್ಯ ರಸ್ತೆಯ ಹೆಬ್ಬಾಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುತ್ತದೆ.

ಕೀಲಾರ, ಹನಕೆರೆ, ಕೆ.ಎಂ.ಎಫ್ ಡೈರಿ, ಬೂದನೂರು, ಭೂತನ ಹೊಸೂರು, ಈಚಗೆರೆ, ಚನ್ನಪ್ಪನ ದೊಡ್ಡಿ, ಬೇಲೂರು, ಹಂಬರಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುತ್ತದೆ ಎಂದು ತಿಳಿಸಲಾಗಿದೆ. (ಎನ್.ಬಿ)

Leave a Reply

comments

Related Articles

error: