
ಮೈಸೂರು
ಸಹಕಾರ ಚಳುವಳಿ ಜಾಗೃತವಾಗಿರಲಿ : ರಾಜೀವ್ ಸಲಹೆ
ವಿದ್ಯಾರ್ಥಿ ದೆಸೆಯಿಂದಲೇ ಸಹಕಾರ ಚಳುವಳಿ ಜಾಗೃತವಾಗಿರಲಿ ಎಂದು ಮೈಸೂರು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ವಿ.ರಾಜೀವ್ ಸಲಹೆ ನೀಡಿದರು.
ಮೈಸೂರಿನ ಸುವರ್ಣ ಸಹಕಾರ ಸೌಧದಲ್ಲಿ ಮೈಸೂರು ಜಿಲ್ಲಾ ಸಹಕಾರ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಸಂಯುಕ್ತಾಶ್ರಯದಲ್ಲಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಎಚ್.ವಿ.ರಾಜೀವ್ ಬಹುಮಾನ ವಿತರಿಸಿದರು. ಬಳಿಕ ಮಾತನಾಡಿದ ಅವರು ಸಹಕಾರ ಚಳುವಳಿಯು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ನಿರಂತರ ನಡೆಯುತ್ತಿರಬೇಕು ಎಂದರು.
ಕಾರ್ಯಕ್ರಮದಲ್ಲಿ ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಎಸ್.ಚಂದ್ರಶೇಖರ್, ಜಿಲ್ಲಾ ಸಹಕಾರ ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಎಂ.ಚನ್ನಬಸಪ್ಪ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭ ಪ್ರಬಂಧ ಸ್ಪರ್ಧೆ ಮತ್ತು ಚರ್ಚಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.