ಮೈಸೂರು

ಆಯುಧಗಳನ್ನು ಪೊಲೀಸ್ ಠಾಣೆಗಳಲ್ಲಿ ಡಿಪಾಸಿಟ್ ಮಾಡಲು ಜಿಲ್ಲಾಧಿಕಾರಿ ಆದೇಶ

ಮೈಸೂರು,ಮಾ.29:- ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ದಿನಾಂಕ 12-05-2018 ರಂದು ನಡೆಯಲಿದ್ದು, ದಿನಾಂಕ 27-03-2018 ರಿಂದ 18-05-2018 ರವರೆಗೆ ಚುನಾವಣಾ ನೀತಿ ಸಂಹಿತೆಯು ಜಾರಿಯಲ್ಲಿರುತ್ತದೆ. ಚುನಾವಣಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಿರಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಶಸ್ತ್ರಾಸ್ತ್ರ ಕಾಯ್ದೆಯಡಿ ಆಯುಧ ರಹದಾರಿ ಹೊಂದಿರುವವರು ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೆ ಆಯುಧಗಳನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಡಿಪಾಸಿಟ್ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ದಿನಾಂಕ 27-03-2018 ರಿಂದ 18-05-2018 ರವರೆಗೆ ಯಾವುದೇ ವ್ಯಕ್ತಿ ಶಸ್ತ್ರಾಸ್ತ್ರ ಒಯ್ಯುವುದು, ಹಿಡಿದುಕೊಂಡು ಓಡಾಡುವುದು, ಸ್ಪೋಟಕ ಮತ್ತು ಮಾರಕಾಸ್ತ್ರಗಳನ್ನು ಒಯ್ಯುವ ಅಥವಾ ಹಿಡಿದುಕೊಂಡು ಓಡಾಡುವುದನ್ನು ನಿಷೇಧಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: