
ಕರ್ನಾಟಕ
ವಾಯುಭಾರ ಕುಸಿತ: ರಾಜ್ಯಾದ್ಯಂತ ಮಳೆ ಸಾಧ್ಯತೆ
ಬೆಂಗಳೂರು,ಮಾ.29: ರಾಜ್ಯಾದ್ಯಂತ ಎರಡು ದಿನ ಮಳೆಯಾಗುವ ಸಾಧ್ಯತೆಗಳಿವೆ ಅಂತಾ ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮಾಹಿತಿ ನೀಡಿದೆ.
ಕೆಲವು ದಿನಗಳ ಹಿಂದೆಯೂ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಮಳೆಯಾಗಿತ್ತು. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಎರಡು ದಿನ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿಯೂ ಸಹ ಅಲ್ಲಲ್ಲಿ ಚದುರಿದ ಸಾಧಾರಣ ಮಳೆಯಾಗಲಿದೆ ಅಂತಾ ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ನಿರ್ದೇಶಕರು ತಿಳಿಸಿದ್ದಾರೆ. (ವರದಿ: ಪಿ.ಎಸ್ )