ಮೈಸೂರು

ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ : ಜಿ.ನಿರ್ಮಲ

ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಪುರುಷರಿಗೆ ಹೋಲಿಸಿದರೆ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ವಿಜ್ಞಾನಿ ಜಿ.ನಿರ್ಮಲ ಹೇಳಿದರು.

ಮೈಸೂರಿನ ಸಿದ್ದಾರ್ಥ ನಗರದ ಪ್ರಾದೇಶಿಕ ವಿಜ್ಞಾನ ವಸ್ತು ಸಂಗ್ರಹಾಲಯದ ಸಭಾಂಗಣದಲ್ಲಿ  ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ರಾಜ್ಯ ಪರಿಷತ್ ಹಾಗೂ ಪ್ರಾದೇಶಿಕ ವಿಜ್ಞಾನ ವಸ್ತು ಸಂಗ್ರಹಾಲಯದ ವತಿಯಿಂದ ಆಯೋಜಿಸಲಾದ ರಾಜ್ಯ ಮಟ್ಟದ ಮಹಿಳಾ ಸಮಾವೇಶದ ತಾಂತ್ರಿಕ ಗೋಷ್ಠಿಯಲ್ಲಿ ಜಿ.ನಿರ್ಮಲ ಪಾಲ್ಗೊಂಡು ಮಾತನಾಡಿದರು.

ಇಂದಿನ ದಿನಗಳಲ್ಲಿ ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತಿರುವ ಪುರುಷರ ಸಂಖ್ಯೆ ಕಡಿಮೆಯಾಗುತ್ತಿದೆ. ಕೃಷಿ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಙನ ಅಳವಡಿಕೆ ಮಾಡುವ ಮುನ್ನ ಮಹಿಳೆಯರು ಶ್ರಮದಿಂದ ವ್ಯವಸಾಯ ಮಾಡುತ್ತಿದ್ದ ಕಾರಣ ಆರೋಗ್ಯ ಸಮಸ್ಯೆ ಉಂಟಾಗುತ್ತಿತ್ತು.  ಆದರೆ ಈಗ ಕೃಷಿಯಲ್ಲಿ ಸುಧಾರಿತ ಯಂತ್ರಗಳು ಬಂದ ಬಳಿಕ ಮಹಿಳೆಯರ ಆರೋಗ್ಯ ಉತ್ತಮಗೊಂಡಿದೆ ಎಂದು ತಿಳಿಸಿದರು.

Leave a Reply

comments

Related Articles

error: