ಕರ್ನಾಟಕ

ಬೆಂಕಿ ಅವಘಡ ; ಹೊತ್ತಿ ಉರಿದ ಕೆಮಿಕಲ್‌ ಫ್ಯಾಕ್ಟರಿ

ಕೋಲರ,ಮಾ.29:  ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ಹೊತ್ತಿ ಉರಿದಿರುವ ಗುರುವಾರ ಬೆಳಗ್ಗೆ ಸಂಭವಿಸಿರುವ ಘಟನೆ ಜಿಲ್ಲೆಯ ಮಾಲೂರು ನಲ್ಲಿ ನಡೆದಿದೆ.

ಫ್ಯಾಕ್ಟರಿ ಹೊತ್ತಿ ಉರಿಯುತ್ತಿದ್ದು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿಯಿಂದಾಗಿ ಫ್ಯಾಕ್ಟರಿಯಲ್ಲಿದ್ದ ಗ್ಯಾಸ್‌ ಸಿಲಿಂಡರ್‌ಗಳು ಸ್ಫೋಟಗೊಂಡಿವೆ ಎನ್ನಲಾಗಿದೆ.   ಕಪ್ಪು ಬಣ್ಣದ ದಟ್ಟ ಹೊಗೆ ಪರಿಸರದಲ್ಲಿ ಆವರಿಸಿಕೊಂಡಿದೆ. ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.  ಮಾಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ವರದಿ; ಪಿ.ಎಸ್ )

Leave a Reply

comments

Related Articles

error: