ಕರ್ನಾಟಕ

ಬಿಜೆಪಿ ಹಾಗೂ  ಕಾಂಗ್ರೆಸ್ ಸರ್ಕಾರಗಳು ಜನತೆಗೆ ನೀಡಿರುವ ಆಶ್ವಾಸನೆಗಳನ್ನು ಈಡೇರಿಸಿಲ್ಲ : ಬಿ.ಎ. ಜೀವಿಜಯ

ರಾಜ್ಯ(ಮಡಿಕೇರಿ)ಮಾ.29:-  ಬಿಜೆಪಿ ಹಾಗೂ  ಕಾಂಗ್ರೆಸ್ ಸರ್ಕಾರಗಳು ಜನತೆಗೆ ನೀಡಿರುವ ಆಶ್ವಾಸನೆಗಳನ್ನು ಈಡೇರಿಸಿಲ್ಲ. ರೈತರ ಹಿತ ಕಾಪಾಡುವಲ್ಲೂ ವಿಫಲವಾಗಿವೆ ಎಂದು ಮಾಜಿ ಸಚಿವ ಬಿ.ಎ. ಜೀವಿಜಯ ಆರೋಪಿಸಿದರು.

ಸೋಮವಾರಪೇಟೆ ಮಾನಸ ಸಭಾಂಗಣದಲ್ಲಿ ನಡೆದ ಹಾನಗಲ್ಲು ಮತ್ತು ಚೌಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷಗಳ ಆಡಳಿತದಿಂದ ಜನತೆ ಬೇಸತ್ತಿದ್ದು, ಪ್ರಾದೇಶಿಕ ಪಕ್ಷಕ್ಕೆ ಈ ಬಾರಿ ಬಹುಮತ ನೀಡಲಿದ್ದಾರೆ. ಜೆಡಿಎಸ್ ಸರ್ಕಾರ ಆಡಳಿತಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಈ ಹಿಂದೆ ರಾಜ್ಯದಲ್ಲಿ ನಡೆಸಿದ 20 ತಿಂಗಳ ಮಾದರಿ ಆಡಳಿತವನ್ನು ಜನತೆಯ ಮುಂದಿಡುವ ಮೂಲಕ ಈ ಬಾರಿ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾರ್ಯಕರ್ತರು ಮುಂದಾಗಬೇಕೆಂದು ಮನವಿ ಮಾಡಿದರು.

ಜಾತ್ಯತೀತ ಜನತಾದಳದ ಕ್ಷೇತ್ರ ಸಮಿತಿ ಅಧ್ಯಕ್ಷ ಹೆಚ್.ಆರ್.ಸುರೇಶ್ ಮಾತನಾಡಿ, ಕಾರ್ಯಕರ್ತರ ಪರಿಶ್ರಮದಿಂದ ಈ ಬಾರಿ ಮಡಿಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದು ಬರಲಿದೆ. ಜೀವಿಜಯ ಅವರು ಶಾಸಕರಾಗಿ ಆಯ್ಕೆಯಾಗಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ತಾ.ಪಂ. ಅಧ್ಯಕ್ಷೆ ಪುಷ್ಪಾರಾಜೇಶ್, ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಡಿಸಿಲ್ವಾ, ಯುವ ಜೆಡಿಎಸ್ ಅಧ್ಯಕ್ಷ ಪ್ರವೀಣ್, ಹಾನಗಲ್ಲು ಗ್ರಾ.ಪಂ. ಅಧ್ಯಕ್ಷೆ ರೇಣುಕಾ ವೆಂಕಟೇಶ್, ಐಗೂರು ಗ್ರಾ.ಪಂ. ಅಧ್ಯಕ್ಷ ಚಂಗಪ್ಪ, ಪ್ರಮುಖರಾದ ಕೆ.ಟಿ.ಪರಮೇಶ್, ಎಚ್.ಬಿ. ಜಯಮ್ಮ, ಶಿವಪ್ಪ ಸೇರಿದಂತೆ ಇತರರು ಇದ್ದರು.

ಇದೇ ಸಂದರ್ಭ ವಿವಿಧ ಪಕ್ಷಗಳನ್ನು ತೊರೆದು ಕಾರ್ಯಕರ್ತರು ಜಾತ್ಯತೀತ ಜನತಾದಳ ಸೇರ್ಪಡೆಗೊಂಡರು.  (ಕೆಸಿಐ,ಎಸ್.ಎಚ್)

Leave a Reply

comments

Related Articles

error: