ಮೈಸೂರು

ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿ ರಚನೆ

ಮೈಸೂರು,ಮಾ.30:- ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018ರ ಅಭ್ಯರ್ಥಿಗಳ ಹಾಗೂ ರಾಜಕೀಯ ಪಕ್ಷಗಳು ಶ್ರವಣ, ದೃಶ್ಯ ಮತ್ತು ಪತ್ರಿಕಾ ಮಾಧ್ಯಮಗಳಲ್ಲಿ ಮಾಡುವ ಚುನಾವಣಾ ಪ್ರಚಾರಗಳಿಗೆ ಸಂಬಂಧಿಸಿದಂತೆ ಜಾಹಿರಾತುಗಳ ಪರಿಶೀಲನೆ ನಡೆಸಿ ನಿಯಂತ್ರಣ ಜಾರಿಯಲ್ಲಿ ತರಲು ಹಾಗೂ ಪಾವತಿ ಸುದ್ದಿ (Paid News)ಸಂಬಂಧಿಸಿದ ಪ್ರಕರಣಗಳನ್ನು ಪರಿಶೀಲಿಸಲು ನಂಜನಗೂಡು ವಿಧಾನಸಭಾ ಕ್ಷೇತ್ರ ಹಾಗೂ ಜಿಲ್ಲಾ ಮಟ್ಟದಲ್ಲಿ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ(ಎಂ.ಸಿ.ಎಂ.ಸಿ.) ಸಮಿತಿ ರಚಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಸಮಿತಿಯ ಅಧ್ಯಕ್ಷರಾಗಿದ್ದು, ಅಪರ ಜಿಲ್ಲಾಧಿಕಾರಿಗಳು, ಮೈಸೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ. ಸಿ.ಕೆ. ಪುಟ್ಟಸ್ವಾಮಿ, ವಾರ್ತಾ ಮತ್ತು ಪ್ರಸಾರ  ಸಚಿವಾಲಯದ  ನಿವೃತ್ತ  ಉಪನಿರ್ದೇಶಕಿ
ಬಿ.ಎಸ್. ಮೀನಾಕ್ಷಿ, ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಸಹಾಯಕ ಪ್ರಾಧ್ಯಾಪಕ ಡಾ. ಎಸ್.ಜಿ. ರಾಘವೇಂದ್ರ, ಆಕಾಶವಾಣಿಯ ಪ್ರೋಗ್ರಾಂ ಎಕ್ಸಿಕ್ಯೂಟಿವ್ ಎಂ.ಜೆ. ಶಿವಸ್ವಾಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ  ನಿರ್ದೇಶಕ ರಾಜು ಆರ್. ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: