ಕರ್ನಾಟಕ

ಕಾರಿನಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

ಚಿಕ್ಕಬಳ್ಳಾಪು,ಮಾ.30: ಕಾರಿನಲ್ಲಿ ಯುವಕನ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕು ಗಡಿಗವಾರಹಳ್ಳಿ ಬಳಿ ನಡೆದಿದೆ.

ಮೃತ ಯುವಕನನ್ನು ಧರ್ಮವಾರಪಲ್ಲಿ ನಿವಾಸಿ ನಟರಾಜ್(28) ಎಂದು ಗುರುತಿಸಲಾಗಿದೆ. ನಟರಾಜ್ ಬೆಂಗಳೂರಿನ ಕೆ.ಆರ್ ಪುರದಲ್ಲಿ ವಾಸವಾಗಿದ್ದರು. ಈಗ ಜಿಲ್ಲೆಯ ಗಡಿಗವಾರಪಲ್ಲಿ ಗ್ರಾಮದ ಹೊರವಲಯದ ಪೊದೆ ಬಳಿ ನಿಲ್ಲಿಸಿದ್ದ ಇಂಡಿಕಾ ಕಾರಿನ ಡ್ರೈವಿಂಗ್ ಸೀಟಿನಲ್ಲಿ ಶವವಾಗಿ ಪತ್ತೆಯಾಗಿದೆ ಘಟನೆ ಕುರಿತು ಸ್ಥಳೀಯರಿಂದ ಮಾಹಿತಿ ಪಡೆದ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವಕನ ತಲೆ ಮತ್ತು ಕತ್ತಿನ ಭಾಗದಲ್ಲಿ ಗಂಭೀರವಾದ ಗಾಯಗಳಾಗಿದ್ದು, ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಲಾಗಿದೆ ಎಂದು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ..

ಈ ಘಟನೆ ಸಂಬಂಧ ಕೆಂಚಾರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ವರದಿ: ಪಿ.ಎಸ್ )

Leave a Reply

comments

Related Articles

error: