ದೇಶ

ಉತ್ತರ ಪ್ರದೇಶದ ರಾಜ್ಯಪಾಲರ ಮನೆಯಲ್ಲಿ ಕಳ್ಳತನ ನಡೆಸಲು ಯತ್ನಿಸುತ್ತಿದ್ದ ಮೂವರ ಬಂಧನ

ದೇಶ(ನವದೆಹಲಿ)ಮಾ.30:- ಉತ್ತರ ಪ್ರದೇಶದ ರಾಜ್ಯಪಾಲ ರಾಮ್ ನಾಯಕ್ ಅವರ ಮನೆಯಲ್ಲಿ ಕಳ್ಳತನ ನಡೆಸಲು ಯತ್ನಿಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಮನೆಯೊಳಗೆ ನುಗ್ಗಿದ್ದರು. ಆಗಲೇ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ರಾಜ್ಯಪಾಲ ರಾಮನಾಯಕ್ ಅವರ ಮುಂಬೈನಲ್ಲಿರುವ ನಿವಾಸದಲ್ಲಿ ಗುರುವಾರ ರಾತ್ರಿ ಕೆಲವರು ಅವರ ಮನೆಯೊಳಗೆ ನುಗ್ಗಲು ಯತ್ನಿಸುತ್ತಿದ್ದರು.  ಕೂಡಲೇ ಕಳ್ಳರನ್ನು ಸೆರೆಹಿಡಿಯಲಾಗಿದೆ. ಬಂಧಿತನನ್ನು ಗೋರಾ ಸಿಂಗ್ ರಜಪೂತ್ ಎಂದು ಗುರುತಿಸಲಾಗಿದೆ. ಪೊಲೀಸರು ಈತನ ಜೊತೆಗಿದ್ದ ಇನ್ನಿಬ್ಬರು ಸಹಚರರನ್ನು ಬಂಧಿಸಿದ್ದಾರೆ. (ಎಸ್.ಎಚ್)

Leave a Reply

comments

Related Articles

error: