ಮೈಸೂರು

ನಡೆದಾಡುವ ದೇವರು ಡಾ.ಶ್ರಿ ಶಿವಕುಮಾರ ಸ್ವಾಮೀಜಿಯವರ 111ನೇ ಜನ್ಮದಿನ : ರಕ್ತದಾನ ಶಿಬಿರ

ಮೈಸೂರು,ಮಾ.30 : ನಡೆದಾಡುವ ದೇವರು ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ 111ನೇ ಜನ್ಮದಿನದ ಪ್ರಯುಕ್ತ ಅಖಿಲ ಭಾರತ ವೀರಶೈವ ಮಹಾಸಭಾ ವೀರಶೈವ ಲಿಂಗಾಯಿತ ಸಂಘ ಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟದ ವತಿಯಿಂದ ರಕ್ತದಾನ ಶಿಬಿರವನ್ನು ಆಯೋಜಿಸಿವೆ.

ಜೆಎಸ್ಎಸ್ ಆಸ್ಪತ್ರೆ ಸಹಯೋಗದಲ್ಲಿ ಜೆಎಸ್ಎಸ್ ಬಾಲಜಗತ್ ಶಾಲೆಯಲ್ಲಿ ಅಂದು ಬೆಳಗ್ಗೆ 9 ಗಂಟೆಯಿಂದ ಶಿಬಿರ ನಡೆಯುವುದು. ಶ್ರೀ ಬಸವೇಶ್ವರ ಪುತ್ಥಳಿಗೆ ಪುಷ್ಪಾರ್ಚನೆ ನಡೆಸಲಾಗುವುದು ಎಂದು ಒಕ್ಕೂಟದ ಅಧ್ಯಕ್ಷ ಕೆ.ಶಿವಕುಮಾರ್ ಪ್ರಕಟಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: