ಮೈಸೂರು

24 ಗಂಟೆಗಳು ನಿರಂತರ ಕೆಲಸ ಮಾಡಲು ನಿರ್ಧಾರ

ಮೈಸೂರಿನ ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ನೌಕರರ ಸಂಘವು  ನವೆಂಬರ್ 27ರಿಂದ ವಾರಕ್ಕೆ ಏಳುದಿನ ದಿನಕ್ಕೆ 24 ಗಂಟೆಗಳು ನಿರಂತರ ಕೆಲಸ ಮಾಡಲು ನಿರ್ಧರಿಸಿದೆ.

ಭಾರತೀಯ ನೋಟು ಮುದ್ರಣ ನೌಕರರ ಸಂಘದ ಅಧ್ಯಕ್ಷ ಎಸ್.ಎ.ರಾಮದಾಸ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಾರಕ್ಕೆ ಏಳು ದಿನಕ್ಕೆ 24 ಗಂಟೆಗಳ ನಿರಂತರ ಕೆಲಸ ಮಾಡಲು ನಿರ್ಧರಿಸಲಾಯಿತು. ಈ ಸಂದರ್ಭ ನೌಕರರ ಸಂಘದ ಪದಾಧಿಕಾರಿಗಳಿಗೆ ಹೂಗುಚ್ಛ ನೀಡುವುದರ ಮೂಲಕ ಅವರನ್ನು ಅಭಿನಂದಿಸಲಾಯಿತು. ಸಭೆಯಲ್ಲಿ ಭಾರತೀಯ ಮಜ್ದೂರ್ ಸಂಘದ ಅಧ್ಯಕ್ಷ ಹಾಗೂ ಮೈಸೂರಿನ ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ನೌಕರರ ಸಂಘದ ಅಧ್ಯಕ್ಷ ಹೆಚ್.ಎಸ್.ಸದಾಶಿವ ಮತ್ತು ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯಲ್ಲಿ ತೆಗೆದುಕೊಂಡ ನಿರ್ಣಯವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರಿಗೆ ಪತ್ರದ ಮೂಲಕ ತಿಳಿಸಲಾಗಿದೆ.

Leave a Reply

comments

Related Articles

error: