ಮೈಸೂರು

ತವರು ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ; ಬಿಜೆಪಿ ತಂತ್ರಕ್ಕೆ ರಣತಂತ್ರ ಹೆಣೆಯಲು ಪ್ಲಾನ್

ಮೈಸೂರು,ಮಾ.31:- ಮೈಸೂರಿನಲ್ಲಿ 2018 ವಿಧಾನ ಸಭಾ ಚುನಾವಣೆ ಹಿನ್ನಲೆ ಚುನಾವಣೆ ಪ್ರಚಾರ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಚುನಾವಣೆ ಹಿನ್ನಲೆಯಲ್ಲಿ  ಸಿಎಂ ಸಿದ್ದರಾಮಯ್ಯ ತಮ್ಮ ತವರು ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ ಎನ್ನಲಾಗಿದೆ.

ಚಾಮುಂಡೇಶ್ಚರಿ ಕ್ಷೇತ್ರದಲ್ಲಿ  ಮತ ಬೇಟೆಗೆ ರೋಡ್ ಶೋ ನಡೆಸಲಿದ್ದಾರೆ ಎನ್ನಲಾಗಿದ್ದು, ತವರು ಜಿಲ್ಲೆ ಮೈಸೂರಿನಲ್ಲಿ ಐದು ದಿನಗಳ ಪ್ರವಾಸದಲ್ಲಿರುವ ಸಿಎಂ‌ ಸಿದ್ದರಾಮಯ್ಯ ನಿನ್ನೆ  ದಿನವಿಡಿ ಬಂಡೀಪುರದ ಖಾಸಗಿ ರೆಸಾರ್ಟ್ ನಲ್ಲಿ ಕುಟುಂಬಸ್ಥರ ಜತೆ  ವಿಶ್ರಾಂತಿ ಪಡೆದರು. ಮತ್ತೆ ಚುನಾವಣಾ ಪ್ರಚಾರಕ್ಕೆ ಧುಮುಕಲಿರುವ ಸಿಎಂ ಸಿದ್ದರಾಮಯ್ಯ ಬಿಜೆಪಿ ತಂತ್ರಕ್ಕೆ ರಣತಂತ್ರ ಹೆಣೆಯಲು ಪ್ಲಾನ್ ಮಾಡಿಕೊಂಡಿದ್ದಾರೆ. ಇಂದು  ಚಾಮುಂಡೇಶ್ವರಿ ಕ್ಷೇತ್ರದ ಸುಮಾರು 22 ಕ್ಷೇತ್ರಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ರಾತ್ರಿ 8.40ರವರೆಗೆ ಪ್ರಚಾರ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಚುನಾವಣೆ ಪ್ರಚಾರಕ್ಕಿಳಿದು ಮಿಂಚಿನ ಸಂಚಲನ ನಡೆಸಲಿದ್ದಾರೆ ಎನ್ನಲಾಗಿದ್ದು, ಅಬ್ಬರದ ಪ್ರಚಾರಕ್ಕೆ ಮತದಾನ ಪ್ರಭುಗಳು ಒಲಿಯುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: