
ಪ್ರಮುಖ ಸುದ್ದಿ
ಅಮಿತ್ ಷಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್
ರಾಜ್ಯ(ಬೆಂಗಳೂರು)ಮಾ.31:- ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬಿಜೆಪಿ ರಾಷ್ಟ್ರಾಧ್ಯಕ್ಷ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಮಿತ್ ಷಾ ಅವರು ಮೈಸೂರು-ಚಾಮರಾಜನಗರ-ಮಂಡ್ಯ ಜಿಲ್ಲೆಯ ಪ್ರವಾಸದಲ್ಲಿದ್ದು, ನಿನ್ನೆ ಅಮಿತ್ ಶಾ ಅವರು ಬಿಜೆಪಿ ಕಾರ್ಯಕರ್ತ ಮೃತ ರಾಜು ಅವರ ನಿವಾಸಕ್ಕೆ ಭೇಟಿ ನೀಡಿದ ವೇಳೆ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದರು. ಈ ವೇಲೆ 5ಲಕ್ಷದ ಚೆಕ್ ಕೂಡ ನೀಡಿದ್ದರು ಎಂದು ಕಾಂಗ್ರೆಸ್ ಆರೋಪಿಸಿದೆ. ಅವರು 5ಲಕ್ಷದ ಚೆಕ್ ನೀಡಿರುವುದು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಅಮಿತ್ ಷಾ ಬಹಳಷ್ಟು ಬಾರಿ ಕರ್ನಾಟಕಕಕ್ಕೆ ಭೇಟಿ ನೀಡಿದ್ದು, ಒಮ್ಮೆಯೂ ರಾಜು ಮನೆಗೆ ಭೇಟಿ ನೀಡಿರಲಿಲ್ಲ. ಸಾವಿನ ಮನೆಯಲ್ಲಿ ಹಣ ನೀಡಿ ಅನುಕಂಪ ಗಿಟ್ಟಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಚುನಾವಣಾ ಆಯೋಗ ಈ ಕೂಡಲೇ ಅಮಿತ್ ಷಾ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ. (ಕೆ.ಎಸ್,ಎಸ್.ಎಚ್)