ದೇಶ

ಸಿಬಿಎಸ್ ಇ ಗೊಂದಲಕ್ಕೆ ತೆರೆ ಎಳೆದ ಸಚಿವ ಪ್ರಕಾಶ್ ಜಾವ್ಡೇಕರ್

ದೇಶ(ನವದೆಹಲಿ)ಮಾ.31:- ಈ ಬಾರಿ ಸಿಬಿಎಸ್ ಇ ಪರೀಕ್ಷೆ ತೆಗೆದುಕೊಂಡಿದ್ದ 16ಲಕ್ಷ ವಿದ್ಯಾರ್ಥಿಗಳಲ್ಲಿ 14ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆಯುವಂತಿಲ್ಲ ಎಂದು ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ಸ್ಪಷ್ಟಪಡಿಸಿದ್ದಾರೆ.

ಹರಿಯಾಣ ಮತ್ತು ದೆಹಲಿ ರಾಜ್ಯಗಳನ್ನು ಹೊರತುಪಡಿಸಿ ಬೇರೆ ರಾಜ್ಯಗಳಲ್ಲಿ ಸಿಬಿಎಸ್ ಇ 10ನೇ ತರಗತಿ ವಿದ್ಯಾರ್ಥಿಗಳು ಗಣಿತ ಮರುಪರೀಕ್ಷೆ ಬರೆಯುವ ಅಗತ್ಯವಿಲ್ಲ ಎಂದಿದ್ದಾರೆ. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಬೋರ್ಡ್ 10ನೇ ತರಗತಿಯ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಕುರಿತು ಟ್ವೀಟ್ ಮಾಡಿರುವ ಸಚಿವರು ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತಂತೆ ದೆಹಲಿ ಮತ್ತು ಹರಿಯಾಣದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬೃಹತ್ ಪ್ರಮಾಣದಲ್ಲಿ ಸೋರಿಕೆಯಾದರೆ ಮಾತ್ರ ಮರುಪರೀಕ್ಷೆ ನಡೆಯಲಿದೆ ಎಂದಿದ್ದಾರಲ್ಲದೇ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಹೆಸರನ್ನು ಉಲ್ಲೇಖಿಸಿರುವ ಅವರು ಈ ರಾಜ್ಯದ ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆಯುವ ಅಗತ್ಯವಿಲ್ಲ ಎಂದಿದ್ದಾರೆ. 12ನೇ ತರಗತಿಯ ಅರ್ಥಶಾಸ್ತ್ರ ಮರು ಪರೀಕ್ಷೆಯು ಏಪ್ರೀಲ್ 25ರಂದು ನಡೆಯಲಿದೆ. 10ನೇ ತರಗತಿಯ ಗಣಿತಶಾಸ್ತ್ರದ ಪರೀಕ್ಷೆಯನ್ನು ಅಗತ್ಯ ಬಿದ್ದಲ್ಲಿ ಮಾತ್ರವೇ ಹರಿಯಾಣ ಮತ್ತು ದೆಹಲಿಗಳಲ್ಲಿ ನಡೆಸಲಾಗುವುದು ಎಂದಿದ್ದಾರೆ. (ಎಸ್.ಎಚ್)

Leave a Reply

comments

Related Articles

error: