ಕರ್ನಾಟಕ

ಶ್ರೀ ಶಿವಕುಮಾರ ಸ್ವಾಮೀಜಿಗಳ 111ನೇ ಹುಟ್ಟು ಹಬ್ಬದ ಅಂಗವಾಗಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಣೆ

ರಾಜ್ಯ(ಮಡಿಕೇರಿ)ಏ.2:- ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ 111ನೇ ಹುಟ್ಟು ಹಬ್ಬದ ಅಂಗವಾಗಿ ಸೋಮವಾರಪೇಟೆ ಗಣಪತಿ ದೇವಾಲಯಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್‍ನಿಂದ ಭಾನುವಾರ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ ನಂತರ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು.

ನಂತರ ಇಲ್ಲಿನ ಜೇಸೀ ವೇದಿಕೆಯಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಸಾರ್ವಜನಿಕರಿಗೆ ಮಜ್ಜಿಗೆ ಹಾಗೂ ಕೋಸಂಬರಿ ವಿತರಿಸಲಾಯಿತು. ಈ ಸಂದರ್ಭ ಮಾತನಾಡಿದ ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಸ್. ಮಹೇಶ್, ಸಿದ್ದಗಂಗಾ ಶ್ರೀಗಳು ಭಾರತ ರತ್ನ ಪ್ರಶಸ್ತಿಗೆ ಅರ್ಹರಾಗಿದ್ದು, ಈ ನಿಟ್ಟಿನಲ್ಲಿ ಸರಕಾರಗಳು ಚಿಂತನೆ ನಡೆಸಬೇಕು. ಸಿದ್ದಗಂಗಾ ಮಠದ ಮೂಲಕ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲೂ ತಮ್ಮ ಛಾಪು ಮೂಡಿಸಿರುವ ಶ್ರೀಗಳ ಕಾರ್ಯ ಶ್ಲಾಘನೀಯ ಎಂದರು.  ಈ ಸಂದರ್ಭ ಶರಣ ಸಾಹಿತ್ಯ ಪರಿಷತ್‍ನ ಕಾರ್ಯದರ್ಶಿ ಪ್ರೇಮ್‍ಕುಮಾರ್, ಖಜಾಂಚಿ ಸೋಮಪ್ಪ, ಜಿ.ಪಂ. ಸದಸ್ಯ ಬಿ.ಜೆ. ದೀಪಕ್, ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ ನಿರ್ವಾಣಿ ಶೆಟ್ಟಿ, ಮಹಿಳಾ ಸಮಾಜ ಅಧ್ಯಕ್ಷೆ ನಳಿನಿಗಣೇಶ್, ಪ.ಪಂ. ಸದಸ್ಯರಾದ ಲೀಲಾ ನಿರ್ವಾಣಿ, ಶೀಲಾ ಡಿಸೋಜ, ಮೋಟಾರ್ ಯೂನಿಯನ್ ಅಧ್ಯಕ್ಷ ಸಿ.ಸಿ. ನಂದ, ಕರವೇ ಅಧ್ಯಕ್ಷ ದೀಪಕ್, ಜಾನಪದ ಪರಿಷತ್ ಕಾರ್ಯದರ್ಶಿ ಎಂ.ಎ. ರುಬೀನಾ, ನಗರ ಗೌಡ ಒಕ್ಕೂಟದ ಅಧ್ಯಕ್ಷ ಪ್ರಕಾಶ್, ಇಂದಿರಾಗಾಂಧಿ ಅಭಿಮಾನಿ ಸಂಘದ ಹೆಚ್.ಎ. ನಾಗರಾಜು, ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕ ಮತ್ತು ಪುರೋಹಿತರ ಸಂಘದ ಅಧ್ಯಕ್ಷ ಟಿ.ಬಿ. ಮೋಹನ್‍ಮೂರ್ತಿ ಶಾಸ್ತ್ರಿ, ಸೋಮೇಶ್ವರ ದೇವಾಲಯದ ಅರ್ಚಕ ಯೋಗೇಶ್, ಉದ್ಯಮಿಗಳಾದ ಸದಾನಂದ್, ಶ್ರೀಧರ್, ಸುಂದರ್, ಆಸ್ಪತ್ರೆಯ ವೈದ್ಯರಾದ ದೇವಿಕಾ ಅವರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: