ಪ್ರಮುಖ ಸುದ್ದಿವಿದೇಶ

ಕುವೈತ್ ನಲ್ಲಿ ರಸ್ತೆ ಅಪಘಾತ: 7 ಮಂದಿ ಭಾರತೀಯರ ಸಾವು

ಕುವೈತ್,ಏ.2-ಪೆಟ್ರೋಲಿಯಂ ಕಾರ್ಖಾನೆಗೆ ಕಾರ್ಮಿಕರನ್ನು ಸಾಗಿಸುತ್ತಿದ್ದ ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 7 ಮಂದಿ ಭಾರತೀಯರು ಸೇರಿದಂತೆ ಒಟ್ಟು 15 ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಕುವೈತ್ ನಲ್ಲಿ ನಡೆದಿದೆ.

ಅಪಘಾತದಲ್ಲಿ ಗಾಯಗೊಂಡಿರುವವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವನ್ನಪ್ಪಿದ ಕಾರ್ಮಿಕರೆಲ್ಲರೂ ಕುವೈತ್ ಆಯಿಲ್ ಕಂಪನಿಯ ಕಾರ್ಮಿಕರು ಎಂದು ತಿಳಿದುಬಂದಿದೆ.

ಇನ್ನು ಮೃತ ಕಾರ್ಮಿಕರ ಪೈಕಿ 7ಭಾರತೀಯರಿದ್ದು, ಉಳಿದಂತೆ ಐದು ಮಂದಿ ಈಜಪ್ಟಿಯನ್ನರ ಮತ್ತು ಮೂವರು ಪಾಕಿಸ್ತಾನ ಮೂಲದ ಕಾರ್ಮಿಕರು ಎನ್ನಲಾಗಿದೆ. ಗಾಯಾಳುಗಳಲ್ಲಿ ಭಾರತೀಯರು ಮತ್ತು ಕುವೈತ್ ಪ್ರಜೆಗಳು ಸೇರಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಕೂಡಲೇ ಆಗಮಿಸಿದ ಕುವೈತ್ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. (ಎಂ.ಎನ್)

 

Leave a Reply

comments

Related Articles

error: