ಕರ್ನಾಟಕ

ವಿದ್ಯುತ್ ಕಂಬ ಹತ್ತಿ ಅಪರಿಚಿತ ಆತ್ಮಹತ್ಯೆ

ಮಂಡ್ಯ,ಏ.02: ವಿದ್ಯುತ್ ಕಂಬದ ಮೇಲೆ ಹತ್ತಿ ಅಪರಿಚಿತ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಉಪ್ಪಿನಕೆರೆ ಗೇಟ್ ಬಳಿ ನಡೆದಿದೆ.

ಅಪರಿಚಿತ ವ್ಯಕ್ತಿಯನ್ನು ಸುಮಾರು 45 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದೆ. ಈತ ಮದ್ದೂರು ಕೆಎಂದೊಡ್ಡಿ ರಸ್ತೆಯಲ್ಲಿ ಬರುವ ಉಪ್ಪಿನಕೆರೆ ಗೇಟ್ ಬಳಿ ತಡರಾತ್ರಿ ಲೈಟ್ ಕಂಬ ಹತ್ತಿದ್ದಾನೆ. ನಂತರ ವಿದ್ಯುತ್ ತಂತಿ ಹಿಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ವಿಚಾರ ತಿಳಿದ ಮದ್ದೂರು ಪೊಲೀಸರು ಮತ್ತು ವಿದ್ಯುತ್ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಲೈಟ್ ಕಂಬದ ಮೇಲಿಂದ ವ್ಯಕ್ತಿಯ ಮೃತ ದೇಹವನ್ನು ಕೆಳಗೆ ಇಳಿಸಿದ್ದಾರೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ವರದಿ: ಪಿ.ಎಸ್ )

Leave a Reply

comments

Related Articles

error: