ಕರ್ನಾಟಕ

ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು (ಏ.2): ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ಬಳ್ಳಾರಿ ಜಿಲ್ಲೆಗೆ ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಗ್ರಾಮ ಲೆಕ್ಕಿಗರ ಹುದ್ದೆಗಳ ವಿವರ:

ಹುದ್ದೆಗಳ ಸಂಖ್ಯೆ: 38, ವಿದ್ಯಾರ್ಹತೆ : ಪಿಯುಸಿ ಅಥವಾ ಇದಕ್ಕೆ ಸಮನಾದ ಸಿಬಿಎಸ್’ಸಿ, ಐಸಿಎಸ್’ಇ ನಡೆಸುವ 12ನೇ ತರಗತಿಯಲ್ಲಿ ಪಾಸಾಗಿರಬೇಕು. ಕಡ್ಡಾಯವಾಗಿ ಕಂಪೂಟರ್ ಜ್ಞಾನ ಹೊಂದಿರಬೇಕು.

ವಯೋಮಿತಿ: ಕನಿಷ್ಠ ವಯೋಮಿತಿಯನ್ನು 18 ವರ್ಷಕ್ಕೆ ನಿಗದಿ ಪಡಿಸಲಾಗಿದೆ. ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗದವರಿಗೆ 35 ವರ್ಷ, 2ಎ,2ಬಿ,3ಎ,3ಬಿ ವರ್ಗದವರಿಗೆ 38 ವರ್ಷ, ಪ.ಜಾ, ಪ.ಪಂ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷ ನಿಗದಿ ಮಾಡಲಾಗಿದೆ.

ಶುಲ್ಕ: ಸಾಮಾನ್ಯ ವರ್ಗ, 2ಎ,2ಬಿ,3ಎ,3ಬಿ ವರ್ಗದವರಿಗೆ 200 ರೂ, ಪ.ಜಾ, ಪ.ಪಂ, ಪ್ರವರ್ಗ 1, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ ಶುಲ್ಕ ನಿಗದಿ ಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-05-2018.

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ http://bellary.nic.in ಗೆ ಭೇಟಿ ನೀಡಿ. (ಎನ್.ಬಿ)

Leave a Reply

comments

Related Articles

error: