ಪ್ರಮುಖ ಸುದ್ದಿಮೈಸೂರು

ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಕಣಕ್ಕೆ : ಏ.23ಕ್ಕೆ ನಾಮಪತ್ರ ಸಲ್ಲಿಸುತ್ತೇನೆ ಸಿಎಂ ಸಿದ್ದರಾಮಯ್ಯ

ಮೈಸೂರು,ಏ.3:- ರಾಜ್ಯದಲ್ಲಿ ಮೇ.12ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಚಾಮುಂಡೇಶ್ವರಿ ವಿಧಾಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದು, ಏ.23ರಂದು ನಾಮಪತ್ರ ಸಲ್ಲಿಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಏಳು ಬಾರಿ ಸ್ಪರ್ಧಿಸಿ ಐದು ಬಾರಿ ಗೆಲುವು ಸಾಧಿಸಿದ್ದೇನೆ. ಈ ಬಾರಿಯೂ ಮುಖ್ಯಮಂತ್ರಿಯಾಗಿ ಕಣಕ್ಕಿಳಿಯುತ್ತೇನೆ. ಜನತೆ ಆಶೀರ್ವದಿಸಿ ಗೆಲ್ಲಿಸಲಿದ್ದಾರೆ ಎಂಬ ವಿಶ್ವವಾಸವಿದೆ ಎಂದಿದ್ದಾರೆ. ಕೆಲವರು ಚಾಮುಂಡೇಶ್ವರಿ ಕ್ಷೇತ್ರದಿಂದ ನಾನು ಸ್ಪರ್ಧಿಸುವುದಿಲ್ಲವೆಂದು ಅಪಪ್ರಚಾರ ಮಾಡುತ್ತಿದ್ದಾರೆ. ಇದು ನನ್ನ ಜೀವನದ ಕೊನೆಯ ಚುನಾವಣೆಯಾಗಿರುವುದರಿಂದ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ. ಜನತೆ ಯಾವ ಸುಳ್ಳು ಪ್ರಚಾರಕ್ಕೂ ಕಿವಿಗೊಡಬೇಡಿ ಎಂದು ಸಿದ್ದರಾಮಯ್ಯ ಇದೇ ವೇಳೆ ಮನವಿ ಮಾಡಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿಯಲ್ಲ ಎಂದು ಹಬ್ಬಿದ ಸುಳ್ಳು ವದಂತಿಗಳಿಗೆ ತೆರೆ ಎಳೆದಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: