ದೇಶ

ಸಿಬಿಎಸ್ಇ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : ದೇಶಾದ್ಯಂತ ಗಣಿತ ಮರು ಪರೀಕ್ಷೆ ಇಲ್ಲ

ದೇಶ(ನವದೆಹಲಿ)ಏ.3:- ಸಿಬಿಎಸ್ಇ 10ನೇ ತರಗತಿಯ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣಿತ ಮರುಪರೀಕ್ಷೆ ದೇಶಾದ್ಯಂತ ನಡೆಸಲಾಗುವುದಿಲ್ಲವೆಂದು ಮಂಡಳಿ ಇಂದು ಅಧಿಕೃತವಾಗಿ ಘೋಷಿಸಿದೆ.

ಇದಕ್ಕೂ ಮೊದಲು ಮತ್ತೆ ಜುಲೈನಲ್ಲಿ ನಡೆಯುವ ಪರೀಕ್ಷೆ ನಡೆಯಲಿದ್ದು, ಅಗತ್ಯಬಿದ್ದರೆ ಹರಿಯಾಣ ಮತ್ತು ದೆಹಲಿಯ ವಿದ್ಯಾರ್ಥಿಗಳು ಆ ಪರೀಕ್ಷೆಯಲ್ಲಿ ಕುಳಿತುಕೊಳ್ಳಬೇಕೆಂದು ತಿಳಿಸಿದೆ.

ಶಾಲಾ ಶಿಕ್ಷಣ ಕಾರ್ಯದರ್ಶಿ ಅನಿಲ್ ಸ್ವರೂಪ್ ಈ ಕುರಿತು ಟ್ವಿಟ್ ಮೂಲಕ ದೃಢಪಡಿಸಿದ್ದಾರೆ. ಮಂಡಳಿಯು 10ನೇ ತರಗತಿಯ ಗಣಿತ ಮತ್ತು 12ನೇ ತರಗತಿಯ ಅರ್ಥಶಾಸ್ತ್ರ ಪತ್ರಿಕೆದ ಮರುಪರೀಕ್ಷೆ ನಡೆಯಲಿದೆ ಎಂದು ತಿಳಿಸಿತ್ತು. ಸಚಿವ ಪ್ರಕಾಶ್ ಜಾವಡೇಕರ್ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ಕೇವಲ ಎರಡು ರಾಜ್ಯಗಳಲ್ಲಿ ಮಾತ್ರ. ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದು, 15ದಿನಗಳೊಳಗೆ ತಿಳಿಸಲಾಗುವುದು ಎಂದಿದ್ದರು. ದೇಶಾದ್ಯಂತ ಮರುಪರೀಕ್ಷೆ ನಡೆಸುತ್ತಿರುವುದಕ್ಕೆ ವಿರೋಧ ವ್ಯಕ್ತವಾಗಿತ್ತು. ಪ್ರಕಾಶ್ ಜಾವಡೇಕರ್ ಕೂಡ ಈ ಕುರಿತು ಟ್ವೀಟ್ ಮಾಡಿ ದೇಶಾದ್ಯಂತ ಪರೀಕ್ಷೆ ನಡೆಸಲಾಗುವುದಿಲ್ಲ. ಅಗತ್ಯ ಬಿದ್ದರೆ ಪೊಲೀಸ್ ತನಿಖೆಯ ನಂತರ ದೆಹಲಿ ಮತ್ತು ಹರಿಯಾಣದಲ್ಲಿ ಜುಲೈನಲ್ಲಿ 10ನೇ ತರಗತಿಯ ಗಣಿತ ಪರೀಕ್ಷೆ, ಏಪ್ರಿಲ್ 25ರಂದು 12ನೇ ತರಗತಿಯ ಅರ್ಥಶಾಸ್ತ್ರ ಪರೀಕ್ಷೆ ನಡೆಸಲಾಗುವುದು ಇದರಿಂದ ಮಕ್ಕಳ ಭವಿಷ್ಯಕ್ಕೆ ಯಾವುದೇ ತೊಂದರೆಯಿಲ್ಲ ಎಂದಿದ್ದರು. (ಎಸ್.ಎಚ್)

Leave a Reply

comments

Related Articles

error: