ಮೈಸೂರು

ಖಿನ್ನತೆಯಿಂದ ಬಳಲುತ್ತಿದ್ದ ಬ್ಯೂಟಿ ಪಾರ್ಲರ್ ಮಾಲಕಿ ನೇಣಿಗೆ ಶರಣು

ಮೈಸೂರು,ಏ.4:-ಖಿನ್ನತೆಯಿಂದ ಬಳಲುತ್ತಿದ್ದ ಬ್ಯೂಟಿ ಪಾರ್ಲರ್ ಮಾಲಕಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿದ್ಯಾರಣ್ಯಪುರಂನಲ್ಲಿ ನಡೆದಿದೆ.

ವಿದ್ಯಾರಣ್ಯಪುರಂ ನಿವಾಸಿ ಸೋಮಶೇಖರ್ ಎಂಬವರ ಪತ್ನಿ ಮೀನಾಕ್ಷಿ ಎಂಬವರೇ ನೇಣಿಗೆ ಶರಣಾದವರಾಗಿದ್ದಾರೆ. ಇವರು ಚಾಮುಂಡಿಪುರಂನಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದ್ದು, ಇವರು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: