ದೇಶ

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನಿರಾಕರಣೆ ಹಿನ್ನೆಲೆ: ನಾಯ್ಡು-ಕೇಜ್ರಿವಾಲ್ ಭೇಟಿ

ನವದೆಹಲಿ(ಏ.4): ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನಿರಾಕರಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಮಂಡಿಸುವ ಸಂಬಂಧ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ವಿವಿಧ ಪಕ್ಷಗಳ ಮುಖಂಡರನ್ನು ಭೇಟಿ ಮಾಡುತ್ತಿದ್ದಾರೆ. ಇದೇ ವಿಷಯವಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬುಧವಾರ ಭೇಟಿ ಮಾಡಿ ನಾಯ್ಡು ಮಾತುಕತೆ ನಡೆಸಿದ್ದಾರೆ.

ನವದೆಹಲಿಯಲ್ಲಿರುವ ಆಂಧ್ರ ಭವನಕ್ಕೆ ಭೇಟಿ ನೀಡಿದ ಕೇಜ್ರಿವಾಲ್ ಅವರನ್ನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬರಮಾಡಿಕೊಂಡರು. ನಂತರ ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡುವ ಕುರಿತು ಮತ್ತು ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ.

ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಪಟ್ಟುಹಿಡಿದು ಕುಳಿತಿರುವ ಚಂದ್ರಬಾಬು ನಾಯ್ಡು ಅವರು ಎರಡು ದಿನಗಳ ಕಾಲ ರಾಜಧಾನಿ ದೆಹಲಿಗೆ ಭೇಟಿ ನೀಡಿದ್ದಾರೆ. ಸಂಸತ್ತಿನ ಕೇಂದ್ರೀಯ ಹಾಲ್‍ನಲ್ಲಿ ವಿವಿಧ ಪಕ್ಷಗಳ ವಿವಿಧ ನಾಯಕರನ್ನು ಭೇಟಿ ಮಾಡಿದ ಮಾತುಕತೆ ನಡೆಸಿದ್ದಾರೆ. ಎನ್‍ಸಿಪಿ ನಾಯಕ ಶರದ್ ಪವರ್, ಪವಾರ್ ಪುತ್ರಿ ಸುಪ್ರಿಯಾ ಸುಳೆ, ಕಾಶ್ಮೀರದ ಫಾರೂಕ್ ಅಬ್ದುಲ್ಲಾ, ತೃಣಮೂಲ ಕಾಂಗ್ರೆಸ್‍ನ ಸೌಗತ ರಾಯ್, ಕಾಂಗ್ರೆಸ್‍ನ ಜ್ಯೋತಿರಾದಿತ್ಯ ಸಿಂಧಿಯಾ, ಜಿತೇಂದ್ರ ರೆಡ್ಡಿ, ವೀರಪ್ಪ ಮೊಯ್ಲಿ ಹಾಗೂ ರಾಜೀವ್ ಸತವ್ ಸೇರಿದಂತೆ ವಿವಿಧ ನಾಯಕರನ್ನು ಭೇಟಿ ಮಾಡಿ ಮಾತಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. ಇದಲ್ಲದೆ, ಅನುಪ್ರಿಯಾ ಪಟೇಲ್, ಹರ್ಸಿಮ್ರತ್ ಕೌರ್ ಬಾದರ್ ಮತ್ತು ತರಿಕ್ ಅನ್ವಾರ್ ಅವರನ್ನು ನಾಯ್ಡು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.(ಎನ್.ಬಿ)

Leave a Reply

comments

Related Articles

error: