ಮೈಸೂರು

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ‘ತೆನೆ’ ಹೊರಲು ಸಿದ್ಧರಾದ ‘ಕೈ’ ಕಾರ್ಯಕರ್ತರು

ಮೈಸೂರು,ಏ.4;- ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುತ್ತಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಮುಖ್ಯಮಂತ್ರಿಗಳಿಗೆ ಬಿಗ್ ಶಾಕ್ ನೀಡಿದೆ.

ಚಾಮುಂಡೇಶ್ವರಿ ಕ್ಷೇತ್ರದ 25 ‘ಕೈ’ ಕಾರ್ಯಕರ್ತರು ತೆನೆ ಹೊರಲು ಸಿದ್ಧವಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸೋಲಿಸಲೇ ಬೇಕೆಂದು ಪಣ ತೊಟ್ಟಿರುವ ಜೆಡಿಎಸ್ 25ಜನ ಕಾಂಗ್ರೆಸ್ ಕಾರ್ಯಕರ್ತರನ್ನು ಜೆಡಿಎಸ್ ಗೆ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಸಿದ್ದರಾಮಯ್ಯನವರ ಪರಮಾಪ್ತರಾಗಿರುವ ದಿ.ಕೆಂಪಿರೇಗೌಡ ಪುತ್ರ ಉಮಾಶಂಕರ್ ಸೇರಿದಂತೆ 25 ಕೈ ಕಾರ್ಯಕರ್ತರು ಜೆಡಿಎಸ್ ಸೇರಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಮತ್ತು ಜಿ.ಟಿ.ದೇವೇಗೌಡ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: