ಮೈಸೂರು

ಕಾರ್ಮಿಕ ದಿನಾಚರಣೆ : ನಾಳೆ ಕ್ರೀಡಾಕೂಟ

ಮೈಸೂರು,ಏ.7 : ಕಾರ್ಮಿಕ ದಿನಾಚರಣೆ ಅಂಗವಾಗಿ ಕಾರ್ಮಿಕ ಕಲ್ಯಾಣ ಮಂಡಳಿ ಸಹಯೋಗದಲ್ಲಿ ಎಐಟಿಯುಸಿ ಜಿಲ್ಲಾ ಮಂಡಳಿ ಮತ್ತು ಭಾರತೀಯ ಜನಕಲಾ ಸಮಿತಿ (ಇಪ್ಟಾ) ದಿಂದ ಏ.8ರಂದು ಜಿಲ್ಲಾ ಮಟ್ಟದ ಕ್ರೀಡಾಕೂಟ ಹಮ್ಮಿಕೊಳ್ಳಲಿದೆ.

ಯಾದವಗಿರಿಯಲ್ಲಿರುವ ರೈಲ್ವೆ ಕ್ರೀಡಾಂಗಣದಲ್ಲಿ ಬೆಳಗ್ಗೆ 9.30ಕ್ಕೆ ಸಹಾಯಕ ಕಾರ್ಮಿಕ ಆಯುಕ್ತ ತಮ್ಮಣ್ಣ ಕ್ರೀಡಾಕೂಟಕ್ಕೆ ಚಾಲನೆ ನೀಡುವರು. ಎಐಟಿಯುಸಿ ಜಿಲ್ಲಾ ಸಮಿತಿ ಅಧ್ಯಕ್ಷ ರಾಜು ಅಧ್ಯಕ್ಷತೆ ವಹಿಸುವರು. ಸಮಿತಿ ಪ್ರಧಾನ ಕಾರ್ಯದರ್ಶಿ ಹೆಚ್.ಆರ್.ಶೇಷಾದ್ರಿ ಸಿಂಡಿಕೇಟ್ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕ ಬಿ. ಮುರಳಿಧರ್ ಕಲ್ಕುರ್, ಭೋರುಕ ಕ್ಸ್ಟ್ರೂಷನ್ ಎಜಿಎಂ ಪ್ರಸನ್ನ ವೆಂಕಟೇಶ್, ವಿ.ಎಸ್.ಟಿ. ಟಿಲ್ಲರ್ಸ್ ಮತ್ತು ಟ್ರಾಕ್ಟ್ರರ್ಸ್ ಲಿಮಿಟೆಡ್ ನ ಉಪಾಧ್ಯಕ್ಷ ಎಸ್.ಎ.ಪರ್ಹಿಭಾನ್ ಭಾಗವಹಿಸುವರು ಎಂದು ಇಪ್ಟಾ ಅಧ್ಯಕ್ಷ ಕೆ.ಎಸ್.ರೇವಣ್ಣ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: