ಮೈಸೂರು

ವೈದ್ಯಕೀಯ ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣು

ಮೈಸೂರು,ಏ.9:- ನಗರದ ಬನ್ನಿಮಂಟಪದ ಬಳಿ ಇರುವ ಜೆಎಸ್ ಎಸ್ ವೈದ್ಯಕೀಯ ಕಾಲೇಜು ವಿದ್ಯಾರ್ಥಿಯೋರ್ವ ನೇಣಿಗೆ ಶರಣಾದ ಘಟನೆ ನಿನ್ನೆ ನಡೆದಿದೆ.

ಮೃತನನ್ನು ಬಿಹಾರ ಮೂಲದ ಬ್ರಿಗೇಂದ್ರನಾಥ್ (23) ಎಂದು ಗುರುತಿಸಲಾಗಿದ್ದು, ಈತ ತನ್ನ ರೂಮಿನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಸಂಜೆಯಾದರೂ ತನ್ನ ರೂಮಿನ ಬಾಗಿಲು ತೆಗೆಯದ ಕಾರಣ ಅನುಮಾನಗೊಂಡ ಸಹಪಾಠಿಗಳು  ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಆತನ ರೂಮಿನಲ್ಲಿ ಡೆತ್ ನೋಟ್ ಲಭ್ಯವಾಗಿದೆ ಎನ್ನಲಾಗಿದ್ದು, ಓದಿನ ಒತ್ತಡ ತಾಳಲಾರದೇ ನೇಣಿಗೆ ಶರಣಾಗಿದ್ದೇನೆ ಎಂದು ಬರೆದುಕೊಂಡಿದ್ದಾನೆ ಎನ್ನಲಾಗಿದೆ. ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: