ಮೈಸೂರು

ಗ್ರಂಥಾಲಯದಲ್ಲಿ ಸಮಸ್ತವೂ ಅಡಗಿದೆ: ಪ್ರೊ. ಕೆ. ಕಾಳಚನ್ನೇಗೌಡ

ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕ ಗ್ರಂಥಾಲಯದ ಆವರಣದಲ್ಲಿ ಬುಧವಾರ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಪ್ರಯುಕ್ತ ಪುಸ್ತಕ ಪ್ರದರ್ಶನ ಹಾಗೂ ನಿವೃತ್ತರಿಗೆ ಆತ್ಮೀಯ ಬೀಳ್ಕೊಡುಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ನಿವೃತ್ತರಾದ  ಮಹಾರಾಜ ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ. ಕಾಳಚನ್ನೇಗೌಡ ಹಾಗೂ ಸ್ನಾತಕ ಗ್ರಂಥಾಲಯ ಪರಿಚಾರಕ ಬೀರಯ್ಯ ಅವರನ್ನು ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಎಚ್.ರಮೇಶ್ ಶಾಲು ಹೊದೆಸಿ, ಸ್ಮರಣಿಕೆ ನೀಡಿ ಸನ್ಮಾನಿಸಿದರು.

ಸನ್ಮಾನ ಸ್ವೀಕರಿಸಿದ ಕಾಳಚನ್ನೇಗೌಡ ಮಾತನಾಡಿ ವಿದ್ಯಾರ್ಥಿಗಳಿಗೆ ಗ್ರಂಥಾಲಯ ಕಾರ್ಡ್ ತೆಗೆದುಕೊಳ್ಳುವುದನ್ನು ಕಡ್ಡಾಯ ಮಾಡಬೇಕಿದೆ. ಗ್ರಂಥಾಲಯದ ಉಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳುವಂತಾಗಬೇಕು. ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಗ್ರಂಥಾಲಯಕ್ಕೆ ಬರುವುದು ಕಡಿಮೆಯಾಗಿದೆ. ಕೇವಲ ಪಠ್ಯಕ್ಕೆ ಸಂಬಮಧಿಸಿದ ವಿಷಯಗಳು ಮಾತ್ರವಲ್ಲ. ಇಲ್ಲಿ ಸಮಸ್ತವೂ ಅಡಗಿದೆ ಎಂದರು.

ಕಾರ್ಯಕ್ರಮದಲ್ಲಿ ವಿಶ್ವವಿದ್ಯಾನಿಲಯ ಸಂಜೆ ಕಾಲೇಜಿನ ಡಾ.ಎಸ್.ಚಂದ್ರಮ್ಮ , ವಿಶ್ವವಿದ್ಯಾನಿಲಯ ಸಂಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ.ಸಿ.ಡಿ.ಪರಶುರಾಮ, ಸ್ನಾತಕ ಗ್ರಂಥಾಲಯ ಉಪ ಗ್ರಂಥಪಾಲಕ ಆರ್.ಕೆ.ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: