ಮೈಸೂರು

ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿದ ಬಿ.ವೈ ವಿಜಯೇಂದ್ರ

ಮೈಸೂರು,ಏ.10:- ಬಿಜೆಪಿ ವರುಣಾ ಕ್ಷೇತ್ರದ ಅಭ್ಯರ್ಥಿ ಎಂದು ಗುರುತಿಸಿಕೊಂಡಿರುವ ಬಿ.ವೈ ವಿಜಯೇಂದ್ರ ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಿದ್ದು,ಇಂದು ಮೈಸೂರಿನ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿದರು.

ಬೋಗಾದಿಯಲ್ಲಿರುವ ಆದಿಚುಂಚನಗಿರಿ ಶಾಖಾ ಮಠದ ಮುಖ್ಯಸ್ಥರಾಗಿರುವ ಸೋಮನಾಥ ಸ್ವಾಮೀಜಿಯನ್ನು ಭೇಟಿ ಮಾಡಿದ ಬಿ.ವೈ ವಿಜಯೇಂದ್ರ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಬಳಿಕ ಉಭಯ ಕುಶಲೋಪರಿ ನಡೆಸಿದರು.ಶ್ರೀಗಳು ರಾಜಕೀಯ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದರು ಎನ್ನಲಾಗಿದೆ. ಈ ಸಂದರ್ಭ ಮಾಜಿ ಮೇಯರ್ ಸಂದೇಶ್ ಸ್ವಾಮಿ, ಮುಡಾ ಮಾಜಿ ಅಧ್ಯಕ್ಷ ನಾಗೇಂದ್ರ ಸೇರಿದಂತೆ ಬಿಜೆಪಿ ಪ್ರಮುಖರು ವಿಜಯೇಂದ್ರ ಜೊತೆಗಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: