ಪ್ರಮುಖ ಸುದ್ದಿ

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ : ವಿಜಯಪುರ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಸೇರಿದ 18 ಜನರ ದಾರುಣ ಸಾವು

ರಾಜ್ಯ(ವಿಜಯಪುರ)ಎ.10:- ನೆರೆಯ ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಸೇರಿದ 18 ಜನರು ದಾರುಣ ಸಾವನ್ನಪ್ಪಿದ ಘಟನೆ ನಡೆದಿದೆ.

ಸತಾರ ಜಿಲ್ಲೆಯ ಕಂಬಾಟಗಿ ಬಳಿ ನಡೆದ ಭೀಕರ ಅಪಘಾತದಲ್ಲಿ ರಸ್ತೆ ವಿಭಜಕಕ್ಕೆ ಟೆಂಪೋ ಡಿಕ್ಕಿ ಹೊಡೆದಿದ್ದು, ಮೂವರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ 18 ಜನರು ದುರಂತ ಸಾವನ್ನಪ್ಪಿದ್ದಾರೆ. ಮೃತರು ವಿಜಯಪುರ ಜಿಲ್ಲೆಯ ಮದಬಾವಿ ತಾಂಡಾ, ತಿಕೋಟ, ಸೇರಿದಂತೆ ವಿವಿಧ ಗ್ರಾಮಗಳಿಗೆ ಸೇರಿದ ನಿವಾಸಿಗಳು ಎನ್ನಲಾಗಿದೆ. ಟೆಂಪೋದಲ್ಲಿ ಒಟ್ಟು  35 ಜನರು ಪ್ರಯಾಣಿಸುತ್ತಿದ್ದರೆಂದು ಹೇಳಲಾಗುತ್ತಿದೆ. ತಮ್ಮ ತುತ್ತಿನ ಚೀಲ ತುಂಬಿಕೊಳ್ಳಲು ಕೂಲಿ ಕೆಲಸ ಹುಡುಕಿಕೊಂಡು  ಮಹಾರಾಷ್ಟ್ರದ ಸತಾರ ಜಿಲ್ಲೆಗೆ ತಾಂಡಾ ನಿವಾಸಿಗಳು ಗುಳೇ ಹೋಗಿದ್ದರು ಎನ್ನಲಾಗಿದೆ. ಮೃತರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಸಾತಾರ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಬಗ್ಗೆ ವಿಚಾರಿಸಲು ತಿಕೋಟ ಹಾಗೂ ಗ್ರಾಮೀಣ ಪೊಲೀಸ್ ಠಾಣೆಗೆ ವಿಜಯಪುರ ಎಸ್ಪಿ ಪ್ರಕಾಶ ನಿಕ್ಕಂ ಸೂಚನೆ ನೀಡಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: