ಪ್ರಮುಖ ಸುದ್ದಿ

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಮತ್ತೆ ಮರಳಲಿದ್ದಾರೆಯೇ ಕಾಂಗ್ರೆಸ್ ಗೆ..?

ರಾಜ್ಯ(ಬೆಂಗಳೂರು)ಏ.10:- ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಬಿಜೆಪಿಯಲ್ಲಿ ತನ್ನನ್ನು ಕಡೆಗಣಿಸಿರುವ ಹಿನ್ನೆಲೆಯಲ್ಲಿ ಮತ್ತೆ ಕಾಂಗ್ರೆಸ್ ಗೆ ಮರಳಲು ಸಿದ್ದರಾಗಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚೆಗೆ ಬಿಜೆಪಿ ಸೇರ್ಪಡೆಯಾದ ಕೃಷ್ಣರನ್ನು ಪಕ್ಷ ಕಡೆಗಣಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ತಮ್ಮ ಶಿಷ್ಯರಾದ ಡಿ.ಕೆ.ಶಿವಕುಮಾರ್, ಪರಮೇಶ್ವರ್ ಅವರ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದ್ದು, ಇನ್ನು ಎಸ್.ಎಂ.ಕೃಷ್ಣ ಕಾಂಗ್ರೆಸ್ ಗೆ ಬರುವ ಬಗ್ಗೆ ಕೆ.ಸಿ. ವೇಣುಗೋಪಾಲ್ ಅವರಿಗೂ ಮಾಹಿತಿ ಲಭ್ಯವಾಗಿದ್ದು, ಈ ಬಗ್ಗೆ ರಾಹುಲ್ ಗಾಂಧಿ ಗಮನಕ್ಕೆ ಕೆ.ಸಿ. ವೇಣುಗೋಪಾಲ್ ತಂದಿದ್ದಾರೆ ಎನ್ನಲಾಗಿದೆ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ ಕೃಷ್ಣ ಪಕ್ಷಕ್ಕೆ ಬರುವುದಾದರೆ ಸ್ವಾಗತ, ಪಕ್ಷ ಬಿಟ್ಟಿರುವ ನಾಯಕರನ್ನು ಕರೆತರಲು ಸಮ್ಮತಿಯನ್ನು ಸೂಚಿಸಿದ ಹಿನ್ನೆಲೆಯಲ್ಲಿ ಕೃಷ್ಣ ಅವರೊಂದಿಗೆ ಡಿಕೆಶಿ ಹಾಗೂ ಪರಮೇಶ್ವರ್ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: