
ಕರ್ನಾಟಕ
ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ : ಯುವಕರಿಬ್ಬರ ಸಾವು
ಬೆಂಗಳೂರು,ಏ.10: ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯದ ಬ್ಯಾಡರಹಳ್ಳಿ ಮುದ್ದಿನಪಾಳ್ಯದ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಬ್ಯಾಡರಹಳ್ಳಿಯ ವಿಘ್ನೇಶ್ವರ ನಗರದವರಾದ ಉಮೇಶ್(20) ಮತ್ತು ಗೌತಮ್(20) ಮೃತ ದುರ್ದೈವಿಗಳು. ಉಮೇಶ್ ಮತ್ತು ಗೌತಮ್ ಇಬ್ಬರು ಒಂದೇ ಪಲ್ಸರ್ ಬೈಕ್ನಲ್ಲಿ ಹೋಗುತ್ತಿದ್ದರು. ಈ ವೇಳೆ ಮುದ್ದಿನಪಾಳ್ಯದ ಪೆಟ್ರೋಲ್ ಬಂಕ್ ಬಳಿ ವೇಗವಾಗಿ ಟಿಪ್ಪರ್ ಲಾರಿ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. (ವರದಿ : ಪಿ.ಎಸ್ )