ಕರ್ನಾಟಕ

ಚುನಾವಣಾ ಅಧಿಕಾರಿಗಳ ಮೇಲೆ ಹಲ್ಲೆ ಯತ್ನ: ಇಬ್ಬರ ಬಂಧನ

ಉಡುಪಿ,ಏ.10: ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಅಧಿಕಾರಿಗಳ ಮೇಲೆ ಜಿಲ್ಲೆಯ ಹಲ್ಲೆಗೆ ಯತ್ನಿಸಿರುವ ಘಟನೆ  ಕುಂದಾಪುರದಲ್ಲಿ ನಡೆದಿದೆ.

ಕುಂದಾಪುರದ ಬಳಿಯ ರಾಷ್ಟ್ರೀಯ ಹೆದ್ದಾರಿ ಕೋಟೇಶ್ವರದ ಸಹನಾ ಲಾಡ್ಜ್ ಮತ್ತು ರೆಸ್ಟೋರೆಂಟ್ ವಿರುದ್ಧ ಸಾರ್ವಜನಿಕರು ದೂರು ನೀಡಿದ್ದರು. ಚುನಾವಣಾ ನೀತಿ ಸಂಹಿತೆ ಪಾಲನೆ ನಿಟ್ಟಿನಲ್ಲಿ ದೂರಿನನ್ವಯ ಸಹನಾ ಹೋಟೆಲ್ ಮೇಲೆ ನಿನ್ನೆ ರಾತ್ರಿ ದಾಳಿ ಮಾಡಲು ಹೋಗುವ ಸಂದರ್ಭದಲ್ಲಿ ಕುಂದಾಪುರ ಸಹಾಯಕ ಕಮಿಷನರ್ ಭೂಬಾಲನ್ ಮತ್ತು ಐಎಎಸ್ ಅಧಿಕಾರಿ ಪೂವಿತಾ ಅವರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ.

ರಾತ್ರಿ ಕುಂದಾಪುರ ಸಹನಾ ಹೋಟೆಲ್ ಆಂಡ್ ಲಾಡ್ಜ್ ಹೋಟೆಲ್ ಮೇಲೆ ದಾಳಿ ನಡೆಸಿದ್ದರು. ಸಹನಾ ಹೋಟೆಲಿನಲ್ಲಿ ಹೊರಗಿನವರಿಗೆ ಮದ್ಯ ಸರಬರಾಜಿಗೆ ಅವಕಾಶ ಇಲ್ಲದೆ ಹೋದರೂ ಅನಧಿಕೃತವಾಗಿ ಮದ್ಯ ಸರಬರಾಜು ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳು ಹೋಟೆಲಿನವರೊಂದಿಗೆ ಪ್ರಶ್ನೆ ಮಾಡಿದ್ದಾರೆ.

ಈ ವೇಳೆ ಹೋಟೆಲಿನವರು ಮತ್ತು ಅಲ್ಲಿದ್ದ ಕೆಲವರೊಂದಿಗೆ ಮಾತಿನ ಚಕಮಕಿ ನಡೆದಿದೆ.  ಅಧಿಕಾರಿಗಳು ಕೂಡಲೇ ಕುಂದಾಪುರ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಕುಂದಾಪುರ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚುನಾವಣಾ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕುರಿತು ಹೋಟೆಲಿನವರ ಮೇಲೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. (ವರದಿ : ಪಿ.ಎಸ್ )

Leave a Reply

comments

Related Articles

error: