ಪ್ರಮುಖ ಸುದ್ದಿ

ನಾಳೆಯಿಂದ ಎರಡು ದಿನಗಳ ಕಾಲ ಕರ್ನಾಟಕ ಪ್ರವಾಸ ನಡೆಸಲಿದ್ದಾರೆ ಅಮಿತ್ ಷಾ

ರಾಜ್ಯ(ಬೆಂಗಳೂರು)ಏ.11:- ರಾಜ್ಯ ವಿಧಾನಸಭಾ ಚುನಾವಣೆಗೆ ದಿನ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಚಾಣಕ್ಯ ಅಮಿತ್ ಷಾ ಹೊಸ ಹೊಸ ತಂತ್ರ ರೂಪಿಸುತ್ತಿದ್ದು, ಈ ಬಾರಿ ಕರ್ನಾಟಕವನ್ನು ಕಾಂಗ್ರೆಸ್ ಮುಷ್ಠಿಯಿಂದ ತಪ್ಪಿಸಲೇಬೇಕೆಂಬ ಪಣ ತೊಟ್ಟಿದ್ದಾರೆ.

ಹುಬ್ಬಳ್ಳಿಗೆ ಆಗಮಿಸಲಿರುವ ಅಮಿತ್ ಷಾ ಧಾರವಾಡದಲ್ಲಿ ನಡೆಯುವ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಲಿದ್ದಾರೆ. ಹುಬ್ಬಳ್ಳಿಯ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಲಿದ್ದು, ಸಾಧನಾಕೇರಿಗೆ ಭೇಟಿ ನೀಡಿ ಬೇಂದ್ರೆ ಸ್ಮಾರಕಕ್ಕೆ ಗೌರವ ಸಲ್ಲಿಸಲಿದ್ದಾರೆ. ಸಂಸತ್ ಅಧಿವೇಶನ ನಡೆಸಲು ಬಿಡದ ವಿಪಕ್ಷಗಳ ವಿರುದ್ಧ ಅಮಿತ್ ಷಾ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಏ.13ರಂದು ಬೆಳಗಾವಿಗೆ ಭೇಟಿ ನೀಡಲಿದ್ದು, ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಲಿದ್ದಾರೆ. ನಿಪ್ಪಾಣಿಯಲ್ಲಿ ನಡೆಯಲಿರುವ ಮಹಿಳಾ ಸಮಾವೇಶದಲ್ಲಿ ಪಾಲ್ಗೊಂಡು ಕೆಎಲ್ ಇ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲಿದ್ದಾರೆ ಎನ್ನಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: