ದೇಶಪ್ರಮುಖ ಸುದ್ದಿ

ಗುಂಡಿನ ಚಕಮಕಿ: ಓರ್ವ ಯೋಧ ಹುತಾತ್ಮ

ಶ್ರೀನಗರ,ಏ.11-ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ.

ಮಂಗಳವಾರ ಮಧ್ಯರಾತ್ರಿ ಜಮ್ಮು ಮತ್ತು ಕಾಶ್ಮೀರದ ಕುಲ್ಘಾಮ್ ಜಿಲ್ಲೆಯ ಕುದ್ವಾನಿಯಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಮೂವರು ಉಗ್ರರನ್ನು ಸೆರೆಹಿಡಿಯಲಾಗಿದೆ ಎಂದು ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿರುವ ಆರು ಸಿಆರ್ಪಿಎಫ್ ಪಡೆ ಕಾರ್ಯಾಚರಣೆಯಲ್ಲಿ ತೊಡಗಿದೆ. ಈ ಘಟನಾ ಸಂಬಂಧ ಕುಲ್ಘಾಮ್ ಮತ್ತು ಅನಂತನಾಗ್ ಜಿಲ್ಲೆಯಲ್ಲಿ ಅಂತರ್ಜಾಲ ಸೇವೆಯನ್ನು ಕಡಿತಗೊಳಿಸಲಾಗಿದೆ. ಇನ್ನು ಮುನ್ನೆಚ್ಚರಿಕೆ ಕ್ರಮವಾಗಿ ಶ್ರೀನಗರ-ಬನಿಹಾಳ್ ನಡುವಿನ ರೈಲ್ವೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಶ್ರೀನಗರ-ಬರಮುಲ್ಲಾ ನಡುವಿನ ರೈಲ್ವೆ ಸಂಚಾರದಲ್ಲಿ ಯಾವುದೇ ವ್ಯತ್ಯಯವಿಲ್ಲ. (ಎಂ.ಎನ್)

Leave a Reply

comments

Related Articles

error: