ಕರ್ನಾಟಕ

ಬೆಂಗಳೂರಿನಲ್ಲಿ ಮತ್ತೆ ಸರಗಳ್ಳರ ಅಟ್ಟಹಾಸ : ವೃದ್ಧೆಯ ಸರ ಎಗರಿಸಿ ಪರಾರಿ

ರಾಜ್ಯ(ಬೆಂಗಳೂರು)ಏ.11:- ಬೆಂಗಳೂರಿನಲ್ಲಿ ಸರಗಳ್ಳರ ಅಟ್ಟಹಾಸ ಮತ್ತೆ ಮುಂದುವರಿದಿದ್ದು, ವಾಕಿಂಗ್ ಗೆ ತೆರಳಿ ವಾಪಸ್ಸಾಗುತ್ತಿದ್ದ ವೃದ್ಧೆಯ ಸರವನ್ನು ಕಳ್ಳರು ಎಗರಿಸಿ ಪರಾರಿಯಾಗಿರುವ ಘಟನೆ ನಡೆದಿದೆ.

ನಗರದ ಶ್ರೇಯಸ್ ಲೇಔಟ್ ನಲ್ಲಿ ಈ ಘಟನೆ ನಡೆದಿದ್ದು, ನರಸಮ್ಮ ಎಂಬವರ ಬಳಿ ಇದ್ದ 80 ಗ್ರಾಂ ಚಿನ್ನದ ಸರವನ್ನು ದ್ವಿಚಕ್ರವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ದೋಚಿ ಪರಾರಿಯಾಗಿದ್ದಾರೆ. ಬೆಳಿಗ್ಗೆ ನರಸಮ್ಮ ವಾಕಿಂಗ್ ಹೋಗಿ ಮನೆಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ಬೈಕ್ ನಲ್ಲಿ ಬಂದ ಇಬ್ಬರು ಸರಗಳ್ಳರು ಈ ಕೃತ್ಯವೆಸಗಿದ್ದಾರೆ.

ಘಟನಾ ಸ್ಥಳಕ್ಕೆ ಕೋಣನಕುಂಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: