
ಕರ್ನಾಟಕಪ್ರಮುಖ ಸುದ್ದಿ
ಶೀಘ್ರವೇ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ: ಯಡಿಯೂರಪ್ಪ
ಬೆಂಗಳೂರು (ಏ.11): ಒಂದೆರಡು ದಿನಗಳಲ್ಲಿ ಉಳಿದ ಎಲ್ಲ ಕ್ಷೇತ್ರಗಳನ್ನು ಒಳಗೊಂಡ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಯಾಗಲಿದೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಚುನಾವಣೆ ನಿರ್ವಹಣಾ ಕಾರ್ಯಗಾರದಲ್ಲಿ ಮಾತನಾಡಿದ ಅವರು, ಈಗಾಗಲೇ 72 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದೇವೆ. ಅದರಲ್ಲಿ 68 ಜನರು ಗೆದ್ದೇ ಗೆಲ್ಲುತ್ತಾರೆಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಈ ಬಾರಿ 150 ಸ್ಥಾನಗಳಲ್ಲಿ ಗೆದ್ದೇ ಗೆಲ್ಲುತ್ತದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ಮಾಡಬೇಕು ಎಂದು ಸಂಕಲ್ಪ ತೊಟ್ಟಿದ್ದಾರೆ. ಕೇಂದ್ರದಿಂದ ಹಿಂದೆಂದೂ ಸಿಕ್ಕದಿರುವ ಸಹಕಾರ ಸಿಗುತ್ತಿದೆ. ಹೀಗಾಗಿ ನಾವು ರಾಜ್ಯದಲ್ಲಿ ಅಧಿಕಾರ ಹಿಡಿಯುತ್ತೇವೆ ಎಂದು ಯಡಿಯೂರಪ್ಪ ಹೇಳಿದರು.(ಎನ್.ಬಿ)