ಮೈಸೂರು

ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿಯಾಗಿ ಮಾಡದಿದ್ದಲ್ಲಿ ರೈತರಿಗೆ ಉಳಿಗಾಲವಿಲ್ಲ : ಜಿ.ಟಿ.ದೇವೇಗೌಡ

ರಾಜ್ಯದಲ್ಲಿ ಬರಗಾಲ ಎದುರಾಗಿದ್ದರೂ ರೈತರಿಗೆ ಸರ್ಕಾರ ಪರಿಹಾರವನ್ನು ವಿತರಿಸಿಲ್ಲ. ಜನಪರ ಯೋಜನೆಗಳನ್ನು ಕೈಗೊಂಡಿದ್ದೇವೆ ಎನ್ನುವ ಸರ್ಕಾರದ ಜನಪರ ಯೋಜನೆಗಳು ಇದೇನಾ ಎಂದು ಜಾತ್ಯಾತೀತ ದಳದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಪ್ರಶ್ನಿಸಿದ್ದಾರೆ.

ಮೈಸೂರಿನ ಹೆಬ್ಬಾಳು ಹೊರವಲಯದಲ್ಲಿರುವ ಶುಭೋಧಿನಿ ಕಲ್ಯಾಣ ಮಂಟಪದಲ್ಲಿ ಬುಧವಾರ ಆಯೋಜಿಸಿದ್ದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಜಿ.ಟಿ.ದೇವೇಗೌಡ ಮಾತನಾಡಿದರು. ಈ ಬಾರಿ ರಾಜ್ಯದಲ್ಲಿ ನೀರಿಲ್ಲದೇ ಬರಪರಿಸ್ಥಿತಿ ಎದುರಾಗಿದೆ. ಬೆಳೆಗಳಿಗೆ ನೀರಿಲ್ಲದಾಗಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಆದರೂ ಸರ್ಕಾರ ರೈತರಿಗೋಸ್ಕರ ಏನನ್ನೂ ಮಾಡಿಲ್ಲ ಎಂದು ಆರೋಪಿಸಿದರು. ಮುಂದಿನ ಬಾರಿ ಹೆಚ್.ಡಿ.ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿಯನ್ನಾಗಿ ಮಾಡದಿದ್ದರೆ ರೈತರಿಗೆ ಉಳಿಗಾಲವಿಲ್ಲ. ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ನಾವು ಶ್ರಮಿಸಬೇಕು  ಎಂದರು.

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಜಾತ್ಯಾತೀತದಳದ ನೂತನ ಅಧ್ಯಕ್ಷರನ್ನಾಗಿ ಟೇಲರ್ ರಾಜು ಅವರನ್ನು  ಜಿ.ಟಿ.ದೇವೇಗೌಡ ನೇಮಕ ಮಾಡಿದರಲ್ಲದೇ, 10 ವರ್ಷಗಳಿಂದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಗಂಗಾಧರ ಗೌಡ ಅವರನ್ನು ರಾಜ್ಯ ಸಮಿತಿಗೆ ಶಿಫಾರಸ್ಸು ಮಾಡುವುದಾಗಿ ತಿಳಿಸಿದರು

ಇದೇ ಸಂದರ್ಭದಲ್ಲಿ ಹಲವರು ಜಾ.ದಳ ಪಕ್ಷ ಸೇರಿದರು. ಜಿಲ್ಲಾ ಚುನಾವಣಾಧಿಕಾರಿ ಪಾಲಾಕ್ಷ, ನಗರಾಧ್ಯಕ್ಷ ರಾಜಣ್ಣ, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಮಾಜಿ ಅಧ್ಯಕ್ಷ ಗಂಗಾಧರ್‍ಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ವನಗಿರಿಗೌಡ, ಜಿಪಂ ಮಾಜಿ ಅಧ್ಯಕ್ಷ ಕಡಕೊಳ ನಾಗರಾಜು ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: