ಸುದ್ದಿ ಸಂಕ್ಷಿಪ್ತ

ಏ.13ಕ್ಕೆ ಸಹಪಠ್ಯ ಚಟುವಟಿಕೆಗಳ ಸಮಾರೋಪ ಸಮಾರಂಭ

ಮೈಸೂರು,ಏ.11-ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನಲ್ಲಿ ಏ.13 ರಂದು ಬೆಳಿಗ್ಗೆ 10 ಗಂಟೆಗೆ ಸಹಪಠ್ಯ ಚಟುವಟಿಕೆಗಳ ಸಮಾರೋಪ ಹಾಗೂ ಕ್ರೀಡಾ ವಿಭಾಗದ ಬಹುಮಾನ ವಿತರಣಾ ಸಮಾರಂಭವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಏಕಲವ್ಯ ಪ್ರಶಸ್ತಿ ಪುರಸ್ಕೃತ ಡಾ.ಎಂ.ಆರ್.ಸವಿತ ಪ್ರಶಾಂತ್ ಬಹುಮಾನ ವಿತರಣೆ ಮಾಡಲಿದ್ದಾರೆ. ಮೈಸೂರು ವಿವಿ ಭೂವಿಜ್ಞಾನ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಎ.ಬಾಲಸುಬ್ರಮಣಿಯನ್ ಸಮಾರೋಪ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿದ್ಯಾವರ್ಧಕ ಸಂಘದ ಗೌರವ ಕಾರ್ಯದರ್ಶಿ ಪಿ.ವಿಶ್ವನಾಥ್ ಭಾಗವಹಿಸಲಿದ್ದು, ಸಂಘದ ಗೌರವಾಧ್ಯಕ್ಷ ಗುಂಡಪ್ಪಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. (ಎಂ.ಎನ್)

Leave a Reply

comments

Related Articles

error: