ಪ್ರಮುಖ ಸುದ್ದಿ

ಮುಕ್ತ ನ್ಯಾಯ ಸಮ್ಮತ ಚುನಾವಣೆ ಹಾಸನದಲ್ಲಿ ನಡೆಯೋದು ಅನುಮಾನ : ಹೆಚ್.ಡಿ.ದೇವೇಗೌಡ

ರಾಜ್ಯ(ಹಾಸನ)ಏ.12:- ಮುಕ್ತ ನ್ಯಾಯ ಸಮ್ಮತ ಚುನಾವಣೆ ಹಾಸನದಲ್ಲಿ ನಡೆಯೋ ಕುರಿತು ಅನುಮಾನವಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ.

ಹಾಸನದ ಅರಕಲಗೂಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಆಡಲಿತ ವ್ಯವಸ್ಥೆ ಹದಗೆಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಮ್ಮಕ್ಕು ಕಾರಣವಾಗಿದೆ. ಸಿದ್ದರಾಮಯ್ಯನವರಿಗೆ ಚುನಾವಣಾ ನೀತಿ ಸಂಹಿತೆ ಲೆಕ್ಕಕ್ಕೆ ಇಲ್ಲದಂತಾಗಿದೆ. ಹಾಸನದಲ್ಲಿ ಮುಕ್ತ ನ್ಯಾಯ ಸಮ್ಮತ ಚುನಾವಣೆ ನಡೆಯೋ ಕುರಿತು ಅನುಮಾನವಿದೆ ಅದಕ್ಕಾಗಿ ಚುನಾವಣಾಧಿಕಾರಿಗಳ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ ಎಂದರು. ರಾಜ್ಯ ಆಡಳಿತ ಯಂತ್ರ ನೀತಿ ಸಂಹಿತೆಗೆ ಮಾನ್ಯತೆ ನೀಡದೇ ಕಡತಗಳನ್ನು ವಿಲೇವಾರಿ ಮಾಡುತ್ತಿದ್ದಾರೆ. ಈ ಕುರಿತು ಮತ್ತೆ ಚುನಾವಣಾ ಆಯೋಗದ ಮುಖ್ಯಸ್ಥರನ್ನು ಭೇಟಿಯಾಗುತ್ತೇನೆ ಎಂದಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: