ಮೈಸೂರು

ಚುನಾವಣಾ ಪ್ರಚಾರ ಟ್ಯಾಬ್ಲೋ ಉದ್ಘಾಟನಾ ಕಾರ್ಯಕ್ರಮ

ಮೈಸೂರು,ಏ.12:- ಭಾರತೀಯ ಜನತಾ ಪಾರ್ಟಿಯ ಚುನಾವಣಾ ಪ್ರಚಾರ ಟ್ಯಾಬ್ಲೋ ಉದ್ಘಾಟನಾ ಕಾರ್ಯಕ್ರಮವನ್ನು ಇಂದು ಮಾತೃ ಮಂಡಳಿ ವೃತ್ತದಲ್ಲಿ  ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ನಗರಾಧ್ಯಕ್ಷ ಡಾ.ಮಂಜುನಾಥ್ ಬಿ ಹೆಚ್, “ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹವನ್ನು ಆಯೋಜಿಸಲಾಗಿದೆ. ತಮ್ಮ ವೈಯುಕ್ತಿಕ ಚಿತಾವಣೆಗಳಿಗೋಸ್ಕರ ಸಂಸತ್ತಿನ ಕಲಾಪ‌ ಜರುಗದಂತೆ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ. ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದೆ. ಪಕ್ಷದ ನಾಯಕರು, ಕಾರ್ಯಕರ್ತರು ಒಂದಾಗಿ ಪಕ್ಷವನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಮೈಸೂರಿನ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಬೇಕು,” ಎಂದರು.

ಈ ಸಂದರ್ಭ ನಂದೀಶ್ ಪ್ರೀತಮ್, ‌ಎಲ್ ನಾಗೇಂದ್ರ ಮತ್ತಿತರರು ಉಪಸ್ಥಿತರಿದ್ದರು. (ಎಸ್.ಎಚ್)

Leave a Reply

comments

Related Articles

error: