ಕರ್ನಾಟಕ

ಕಳ್ಳತನ ಮಾಡಲು ಬಂದ ದುಷ್ಕರ್ಮಿಗಳಿಂದ ಯುವಕನ ಕೊಲೆ

ಬೆಂಗಳೂರು,ಏ.13: ಕಳ್ಳತನ ಮಾಡುವ ನೆಪದಲ್ಲಿ ಬಂದ ದರೋಡೆಕೋರರು ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ನಾಯಂಡಹಳ್ಳಿ ಮೆಟ್ರೋ ನಿಲ್ದಾಣ ಬಳಿ ನಡೆದಿದೆ.

ಮೆಟ್ರೋ ನಿಲ್ದಾಣ ಮುಂಬಾಗದಲ್ಲಿ ನಡೆದುಕೊಂಡು ಬರುತ್ತಿದ್ದ ಯುವಕನನ್ನು ಮೊಬೈಲ್ ಕಳ್ಳತನ ಮಾಡಲು ಬಂದ  ದುಷ್ಕರ್ಮಿಗಳು ಚಾಕುವಿನಿಂದ ಎದೆಗೆ ಇರಿದು ಕೊಲೆ ಮಾಡಿ ಮೊಬೈಲ್ ಮತ್ತು ಪರ್ಸ್ ದೋಚಿದ್ದಾರೆ. ಯುವಕನ ಗುರುತು ಪತ್ತೆಯಾಗಿಲ್ಲ. ಘಟನೆ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. (ವರದಿ: ಪಿ.ಎಸ್ )

Leave a Reply

comments

Related Articles

error: