ಕರ್ನಾಟಕ

ಲಾರಿ ಕಂಟೈನರ್‌ಗೆ ಢಿಕ್ಕಿ: ಇಬ್ಬರ ಸಾವು

ಆನೇಕಲ್,ಎ.13: ಕಂಟೈನರ್ ಮತ್ತು ಗೂಡ್ಸ್ ಲಾರಿ ನಡುವೆ ಅಪಘಾತ ಸಂಭವಿಸಿ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ನ ಅತ್ತಿಬೆಲೆ ಚೆಕ್ ಪೋಸ್ಟ್ ಬಳಿ ನಡೆದಿದೆ.

ಮೃತರು ತಮಿಳುನಾಡು ಮೂಲದ ತಂಜಾವೂರಿನ ವೇಲುಮುರುಗನ್(25) , ಇನ್ನೋರ್ವನ ಗುರುತು ಪತ್ತೆಯಾಗಿಲ್ಲ. ಇಬ್ಬರೂ ಸಂಪೂರ್ಣ ಸುಟ್ಟು ಕರಕಲಾಗಿರುವುದರಿಂದ ಮೃತದೇಹದ ಗುರುತು ಪತ್ತೆ ಕಷ್ಟಕರವಾಗಿದೆ. ಮಧ್ಯರಾತ್ರಿ ಹೊಸೂರು ಕಡೆಯಿಂದ ಬಂದ ಗೂಡ್ಸ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ಕಂಟೈನರ್ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಬೆಂಕಿ ಕಾಣಿಸಿಕೊಂಡು ಎರಡು ವಾಹನಗಳಿಗೆ ವ್ಯಾಪಸಿದ ಪರಿಣಾಮ ಲಾರಿಯೊಳಗಿದ್ದ ಇಬ್ಬರು ಸಜೀವ ದಹನವಾಗಿದ್ದಾರೆ.  ಈ ಬಗ್ಗೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ವರದಿ: ಪಿ.ಎಸ್ )

Leave a Reply

comments

Related Articles

error: