ಕರ್ನಾಟಕದೇಶ

ದೇವೇಗೌಡರ ನಿವಾಸಕ್ಕೆ ತೆಲಂಗಾಣ ಸಿಎಂ ಕೆ.ಸಿ.ಆರ್, ನಟ ಪ್ರಕಾಶ್‌ ರೈ ಭೇಟಿ

ಬೆಂಗಳೂರು (ಏ.13): ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಇಂದು ತೆಲಂಗಾಣ ಮುಖ್ಯಮಂತ್ರಿ ಹಾಗೂ ಬಹುಭಾಷಾ ನಟ ಪ್ರಕಾಶ್ ರೈ ಭೇಟಿ ನೀಡಿ ಚರ್ಚಿಸಿದರು. ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿರುವ ಈ ಸಂದರ್ಭ ಇಬ್ಬರ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಪದ್ಮನಾಭನಗರ ನಿವಾಸದಲ್ಲಿ ದೇವೇಗೌಡರ ಜೊತೆ ಆರಂಭವಾಗಿರುವ ಚರ್ಚೆಯ ವಿವರ ಇನ್ನಷ್ಟೇ ಹೊರಬೀಳಬೇಕಿದೆ. ಮಾತುಕತೆ ವೇಳೆ ರಾಜ್ಯ ರಾಜಕೀಯದ ಬಗ್ಗೆಯೂ ಚರ್ಚೆ ನಡೆಯಲಿದೆ ಎನ್ನಲಾಗಿದ್ದು, ಜೆಡಿಎಸ್‍ಗೆ ತೆಲಗು ಭಾಷಿಕರ ಬೆಂಬಲ ಘೋಷಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ತೆಲಂಗಾಣ ಸಿಎಂ ಕನಸಾಗಿರುವ ರಾಷ್ಟ್ರಮಟ್ಟದಲ್ಲಿ ತೃತೀಯ ರಂಗ ರಚನೆಯ ಕುರಿತು ವಿಸ್ತೃತ ಚರ್ಚೆ ನಡೆಯಲಿದೆ.

ಕೆಸಿಆರ್ ಜೊತೆ ನಟ ಪ್ರಕಾಶ್ ರೈ ಅವರೂ ಕೂಡ ಇವರೊಂದಿಗೆ ಆಗಮಿಸಿದ್ದು ವಿಶೇಷವಾಗಿತ್ತು ಕೂತಹಲಕ್ಕೆ ಎಡೆಮಾಡಿಕೊಟ್ಟಿದೆ. ಚರ್ಚೆ ನಡೆಯುತ್ತಿದ್ದು ಮಾತುಕತೆಯ ವಿವರಗಳು ಇನ್ನಷ್ಟೇ ಹೊರಬೀಳಬೇಕಿದೆ.(ಎನ್.ಬಿ)

Leave a Reply

comments

Related Articles

error: